ಮಾಜಿ ಎಂಎಲ್ ಸಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ನಿಧನ.!
ಬೆಂಗಳೂರು: ಮಾಜಿ ಎಂಎಲ್ ಸಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕಲ ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕರಿಯಣ್ಣ ಸಂಗಟಿ ಅವರು ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೂಲತಃ ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದ ನಿವಾಸಿಯಾಗಿದ್ದ ಕರಿಯಣ್ಣ ಸಂಗಟಿ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಕರಿಯಣ್ಣ ಸಂಗಟಿ ನಿಧನಕ್ಕೆ ರಾಜಕೀಯ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.