Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೈ ಕೈ ಬೆಸೆದು ದಾಖಲೆಯ ಮಾನವ ಸರಪಳಿ ರಚನೆ

ಕೈ ಕೈ ಬೆಸೆದು ದಾಖಲೆಯ ಮಾನವ ಸರಪಳಿ ರಚನೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಮಹತ್ವ ಸಾರುವ ನಿಟ್ಟಿನಲ್ಲಿ ಭಾನುವಾರ ಜಿಲ್ಲೆಯಲ್ಲಿ 145 ಕಿ.ಮೀ ಅತಿ ಉದ್ದದ ಮಾನವ ಸರಪಳಿ ನಿರ್ಮಿಸಲಾಯಿತು.

ಜಿಲ್ಲೆಯಲ್ಲಿ 1.50 ಲಕ್ಷಕ್ಕೂ ಅಧಿಕ ಮಂದಿ ಸುಮಾರು 145 ಕಿ.ಮೀ ಮಾನವ ಸರಪಳಿ ರಚಿಸಿ, ಸಾವಿರಾರು ವಿದ್ಯಾರ್ಥಿಗಳು ಹಾಗೂ ಜನರು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಕಾಪಾಡುವುದಕ್ಕಾಗಿ ಪ್ರಜಾಪ್ರಭುತ್ವ ಬಲಪಡಿಸುತ್ತೇವೆ ಎಂಬ ಸಂದೇಶ ಸಾರಿದರು. ಜಾತಿ, ಧರ್ಮ, ವರ್ಗಗಳ ಭೇದವಿಲ್ಲದೆ ಎಲ್ಲ ಜನರೂ ಕೈ-ಕೈ ಬೆಸೆದು ನಿಲ್ಲುವ ಮೂಲಕ ನಾವೆಲ್ಲರೂ ಒಂದೇ ಎಂಬ ಒಗ್ಗಟ್ಟಿನ ಮಂತ್ರ ಜಪಿಸಿದರು.

ಹಿರಿಯೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಪಂ ಸಿಇಒ ಎಸ್.ಜೆ. ಸೋಮಶೇಖರ್, ಎಸ್ಪಿಾ ರಂಜಿತ್ ಬಂಡಾರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಓದಿದ ಸಂವಿಧಾನ ಪೀಠಿಕೆಯನ್ನು ಎಲ್ಲರೂ ಸಾಮೂಹಿಕವಾಗಿ ಪಠಿಸಿದರು.
ಮಾನವ ಸರಪಳಿಯುದ್ದಕ್ಕೂ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಎನ್ಜಿಿಒಗಳ ಸದಸ್ಯರು, ರೈತ ಸಂಘದವರು, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಪಾಲ್ಗೊಂಡು ಮಾನವ ಸರಪಳಿಯಲ್ಲಿಯೇ ಎಲ್ಲರೂ ಪರಸ್ಪರ ಕೈ ಹಿಡಿದು ಮೇಲೆಕ್ಕೆತ್ತಿ ಜೈಹಿಂದ್, ಜೈ ಕರ್ನಾಟಕ ಎಂದು ಘೋಷಣೆ ಕೂಗಿ ಪ್ರಜಾಪ್ರಭುತ್ವ ದಿನವನ್ನು ಸಂಭ್ರಮಿಸಿದರು.

ಮಾನವ ಸರಪಳಿಯುದ್ದಕ್ಕೂ ಹಬ್ಬದ ವಾತಾವರಣ ಮನೆ ಮಾಡಿತ್ತು. ವಿವಿಧ ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು, ಜನಪ್ರತಿನಿಧಿಗಳು ಉತ್ಸಾಹದಿಂದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವೇದಿಕೆ ಕಾರ್ಯಕ್ರಮ ಜರುಗಿದ ಹಿರಿಯೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ವಿಶೇಷವಾಗಿ ಮಾನವ ಸರಪಳಿ ನಿರ್ಮಿಸಲಾಯಿತು.

ಜಿಲ್ಲೆಯಲ್ಲಿ ಗಮನ ಸೆಳೆದ ಬೃಹತ್ ಮಾನವ ಸರಪಳಿ:
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ರಚಿಸಲಾದ 145 ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ ಗಮನ ಸೆಳೆಯಿತು.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಮೇಲಿನ ಕಣಿವೆ ಪ್ರದೇಶದಿಂದ ಪ್ರಾರಂಭವಾದ ಮಾನವ ಸರಪಳಿಯು ಚಳ್ಳಕೆರೆ ಮಾರ್ಗವಾಗಿ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿವರೆಗೂ ಮಾನವ ಸರಪಳಿ ರಚಿಸಲಾಯಿತು. ಇದರಲ್ಲಿ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕಿನ ವಿದ್ಯಾರ್ಥಿಗಳು, ನೌಕರರು, ಜನಪ್ರತಿನಿಧಿಗಳೂ, ಸಂಘ ಸಂಸ್ಥೆಗಳು, ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಸುಮಾರು 1.50 ಲಕ್ಷ ಜನ ಈ ಮಾನವ ಸರಪಳಿಯಲ್ಲಿ ಭಾಗವಹಿಸಿದ್ದರು.

ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಸಿ ನೆಟ್ಟ ಸಚಿವರು :
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಾನವ ಸರಪಳಿ ನಿರ್ಮಿಸುವುದರ ಜೊತೆಗೆ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಹಿರಿಯೂರು ನಗರದ ಅಂಬೇಡ್ಕರ್ ವೃತ್ತದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸಸಿ ನೆಟ್ಟು, ನೀರೆರೆದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀಥರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಹಿರಿಯೂರು ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ಸೇರಿದಂತೆ ಉಪಾಧ್ಯಕ್ಷರು, ಸದಸ್ಯರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ