Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಭರ್ತಿಗೆ ನಾಲ್ಕು ಅಡಿ ಬಾಕಿ: ರಕ್ಕಸಕೊಪ್ಪ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ

ಬೆಳಗಾವಿ, ಜುಲೈ 27: ಬೆಳಗಾವಿ ನಗರದ ಪ್ರಮುಖ ಕುಡಿಯುವ ನೀರಿನ ನೀರಿನ ಮೂಲವಾಗಿರುವ ರಕ್ಕಸಕೊಪ್ಪ ಜಲಾಶಯ ಭರ್ತಿಯಾಗಲು ಇದೀಗ ಕೇವಲ ನಾಲ್ಕು ಅಡಿ ಮಾತ್ರ ಬಾಕಿಯಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಜಲಾಶಯದಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಹೆಚ್ಚಿದ್ದು, ನಗರ ನಿವಾಸರಲ್ಲಿ ನೆಮ್ಮದಿ ಮೂಡಿಸಿದೆ.

ಭಾನುವಾರದ ವೇಳೆಗೆ ಜಲಾಶಯದ ನೀರಿನ ಮಟ್ಟ 2,470.3 ಅಡಿ ತಲುಪಿದ್ದು, ಪೂರ್ಣ ಜಲಾಶಯ ಮಟ್ಟ 2,477 ಅಡಿ ಆಗಿದೆ. ಜಲಾಶಯದ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 0.5 ಟಿಎಂಸಿ ಆಗಿದೆ.

ಮಾರ್ಕಂಡೇಯ ನದಿ ಹಾಗೂ ಜಾಂಬುಳ ಕಾಲುವೆ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಜಲಾಶಯದ ಸಂಗ್ರಹ ವೇಗವಾಗಿ ಏರಿಕೆಯಾಗುತ್ತಿದೆ. ಇದೇ ರೀತಿಯಲ್ಲಿ ಮಳೆ ಮುಂದುವರಿದರೆ ಇನ್ನೂ ಕೆಲವೇ ದಿನಗಳಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುವ ನಿರೀಕ್ಷೆ ಇದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

1963ರಲ್ಲಿ ನಿರ್ಮಾಣಗೊಂಡ ರಕ್ಕಸಕೊಪ್ಪ ಜಲಾಶಯದ ಮೂಲ ಸಂಗ್ರಹ ಮಟ್ಟ 2,470 ಅಡಿ ಆಗಿತ್ತು. ಬಳಿಕ ಬೆಳಗಾವಿ ನಗರದ ಜನಸಂಖ್ಯೆ ಹೆಚ್ಚಳ ಹಾಗೂ ಕುಡಿಯುವ ನೀರಿನ ಬೇಡಿಕೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು, 1985ರಲ್ಲಿ ಆರು ವೇಸ್ಟ್‌ವೇಗಳನ್ನು ನಿರ್ಮಿಸಿ ಮಾರ್ಕಂಡೇಯ ನದಿಗೆ ಗೇಟ್‌ಗಳನ್ನು ಅಳವಡಿಸುವ ಮೂಲಕ ಪೂರ್ಣ ಜಲಾಶಯ ಮಟ್ಟವನ್ನು 2,477 ಅಡಿಗೆ ಹೆಚ್ಚಿಸಲಾಯಿತು.

ಸುಮಾರು ಏಳು ಲಕ್ಷ ಜನಸಂಖ್ಯೆ ಹೊಂದಿರುವ ಬೆಳಗಾವಿ ನಗರಕ್ಕೆ ಪ್ರತಿದಿನ 130ರಿಂದ 135 ಎಂಎಲ್‌ಡಿ (ಮಿಲಿಯನ್ ಲೀಟರ್ ಪ್ರತಿ ದಿನ) ಕುಡಿಯುವ ನೀರಿನ ಅಗತ್ಯವಿದೆ. ನಗರದ ಕುಡಿಯುವ ನೀರಿನ ಪೂರೈಕೆ ಮುಖ್ಯವಾಗಿ ರಕ್ಕಸಕೊಪ್ಪ ಹಾಗೂ ಹಿಡಕಲ್ ಜಲಾಶಯಗಳ ಮೇಲೆ ಅವಲಂಬಿತವಾಗಿದೆ.

ಸಾಮಾನ್ಯವಾಗಿ ಬೇಸಿಗೆ ಅವಧಿಯಲ್ಲಿ ತಾಪಮಾನ ಏರಿಕೆ ಹಾಗೂ ನೀರಿನ ಆವಿಯಾಗುವಿಕೆ ಹೆಚ್ಚಾಗುವುದರಿಂದ ಜಲಾಶಯದ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತದೆ. ಆದರೆ ಈ ಬಾರಿ ಮುಂಗಾರು ಉತ್ತಮವಾಗಿರುವುದರಿಂದ ಜಲಾಶಯದಲ್ಲಿ ಸಮೃದ್ಧ ಪ್ರಮಾಣದಲ್ಲಿ ನೀರು ಸಂಗ್ರಹವಾಗುತ್ತಿದ್ದು, ಮುಂದಿನ ಬೇಸಿಗೆಗೂ ಕುಡಿಯುವ ನೀರಿನ ಕೊರತೆ ಎದುರಾಗದ ವಿಶ್ವಾಸ ವ್ಯಕ್ತವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ