LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರು ಅರೆಸ್ಟ್- ಅಪಾರ ಶಸ್ತ್ರಾಸ್ತ್ರಗಳು ವಶಕ್ಕೆ

ಇಂಫಾಲ್ : ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ನಾಲ್ವರು ಉಗ್ರರನ್ನು ಮಣಿಪುರದ ಭದ್ರತಾ ಪಡೆಗಳು ಬಂಧಿಸಿವೆ ಹಾಗೂ ಅಪಾರ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ಕಕ್ಚಿಂಗ್ ಜಿಲ್ಲೆಯ ಚೆಕ್‌ಪಾಯಿಂಟ್‌ನಿಂದ ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿಯ ಸದಸ್ಯನನ್ನು ಬಂಧಿಸಲಾಗಿದೆ. ಮತ್ತೊಂದೆಡೆ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಕೊಂಜೆಂಗ್‌ಬಾಮ್‌ನಿಂದ ಸಂಘಟನೆಯ ಮತ್ತೋರ್ವ ಸದಸ್ಯನನ್ನು ಬಂಧಿಸಲಾಗಿದೆ" ಎಂದು ಅವರು ಮಾಹಿತಿ ನೀಡಿದ್ದಾರೆ.

"ಇಂಫಾಲ್ ಪಶ್ಚಿಮ ಜಿಲ್ಲೆಯ ಯುಮ್ನಾಮ್ ಹುಯಿಡ್ರೋಮ್‌ನಲ್ಲಿರುವ ಕೆಸಿಪಿ ಸಂಘಟನೆಯ ಮತ್ತೋರ್ವ ಸದಸ್ಯನನ್ನು ಆತನ ನಿವಾಸದಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಿಷೇಧಿತ ಸಂಘಟನೆಗಳಿಗೆ ಸೇರಿದ ಉಗ್ರರ ಬಳಿಯಿಂದ ರೈಫಲ್‌ಗಳು ಮತ್ತು ಪಿಸ್ತೂಲ್‌ಗಳು ಸೇರಿದಂತೆ ಅಪಾರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ" ಎಂದಿದ್ದಾರೆ.

"ರಾಜ್ಯದಲ್ಲಿ ಸುಲಿಗೆ ಮತ್ತು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರನ್ನು ಬಂಧಿಸಲು ವ್ಯಾಪಕವಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಇದರ ಭಾಗವಾಗಿ ನಡೆದ ಗುಪ್ತಚಾರ ಆಧಾರಿತ ಶೋಧ ಕಾರ್ಯಚಾರಣೆ ವೇಳೆಯಲ್ಲಿ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ" ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026