ಬೆಂಗಳೂರು ಸೇರಿದಂತೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಈ ಜಿಲ್ಲೆಗಳಲ್ಲಿ.!
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಸಹ ಕಡಿಮೆಯಾಗಿಲ್ಲ. ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚುರುಕು ಪಡೆದಿದ್ದು, ಕಳೆದ ಎರಡು ದಿನಗಳಿಂದ ಹಲವೆಡೆ ಮಳೆಯಾಗುತ್ತಿದೆ.
ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದಿರುವ ಹವಾಮಾನ ಇಲಾಖೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಗುರುವಾರ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 15ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.