ಗುಲಾಲ್ ಬಣ್ಣ ತಯಾರಿಸುವ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ನಾಲ್ವರು ಮಹಿಳೆಯರು ಸಜೀವದಹನ…!
ಚಂಡೀಗಢ: ಗುಲಾಲ್ ಬಣ್ಣ ತಯಾರಿಸುವ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ನಾಲ್ವರು ಮಹಿಳೆಯರು ಸಜೀವದಹನವಾಗಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.
ಹರಿಯಾಣದ ಜಿಂದ್ ಜಿಲ್ಲೆಯ ಲಾಲ್ ಗುಲಾಲ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ. ಆಕಸ್ಮಿಕ ಬೆಂಕಿ ಅವಘಡದಲ್ಲಿ ನಾಲ್ವರು ಮಹುಳೆಯರು ಸಾವನ್ನಪ್ಪಿದ್ದಾರೆ. 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿ ಬೆಂಕಿ ನಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.