LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮೇ 11 ರಿಂದ 10 ದಿನಗಳ ಕಾಲ ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಎರ್ಪಡಿಸಿದೆ.

ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ 05 ರಂದು ಬೆಳಿಗ್ಗೆ 10.00 ಘಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು, ಹಸಿಗಾಳ(ಅಂಚೆ), ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬಹುದು.

ಸಂದರ್ಶನಕ್ಕೆ  ಹಾಜರಾಗಲು ಅಸಾಧ್ಯವಾದಲ್ಲಿ ಮೇ 05 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050, 9591514154, 9686248369,̳̳ 6363139123, 9505894247 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026