LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಕಿಂಡೋರಮಾ ದಿಂದ ಉಚಿತ ಶಸ್ತ್ರಚಿಕಿತ್ಸೆ

ಬೆಂಗಳೂರು: ಸ್ತ್ರೀರೋಗದ ಸಮಸ್ಯೆಗಳಿಂದ ಬಳಲುತ್ತಿರುವ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರಿಗೆ ಉಚಿತವಾಗಿ ಸ್ತ್ರೀರೋಗ ಮತ್ತು ಇತರ ಸಾಮಾನ್ಯ ಶಸ್ತ್ರಚಿಕಿತ್ಸೆ ನೀಡಲು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಕಿಂಡರ್ ಆಸ್ಪತ್ರೆಯು ಮುಂದಾಗಿದೆ ಎಂದು  ಕಿಂಡರ್ ವುಮೆನ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷರಾದ ಡಾ. ವಿ.ಕೆ.ಪ್ರದೀಪ್ ಕುಮಾರ್ ತಿಳಿಸಿದರು.

ಬೆಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದವರು, ಕಿಂಡರ್ ವುಮೆನ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಸಿಎಸ್‌ಆರ್ ಉಪಕ್ರಮದಡಿಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಯೋಜನೆ ಇದಾಗಿದ್ದು, 'ಕಿಂಡ್ ಮಾ ಜೀವನ' ಹೆಸರಿನಡಿ ಮಹದೇವಪುರ ಕ್ಷೇತ್ರದಲ್ಲಿ ಮಹಿಳೆಯರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುತ್ತದೆ. ಈ ಮೂಲಕ ಆರ್ಥಿಕ ದುರ್ಬಲ ವರ್ಗದ ಮಹಿಳೆಯ ಆರೋಗ್ಯ ಅಗತ್ಯತೆಗಳನ್ನು ಪೂರೈಸುವ ಉದ್ದೇಶವನ್ನು ಈ ಯೋಜನೆಯು ಹೊಂದಿದೆ.

ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಪಡೆಯಲು ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಕಷ್ಟವಾಗಬಹುದು. ಈ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದ ಮಹಿಳೆಯರಿಗೆ 'ಕಿಂಡರ್ ಮಾ ಜೀವನ' ಮೂಲಕ ಅತ್ಯುತ್ತಮ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಕಿಂಡರ್ ವುಮೆನ್ಸ್ ವೆಲ್ಫೇರ್ ಟ್ರಸ್ಟ್ ಮಹತ್ವದ ಹೆಜ್ಜೆ ಇಟ್ಟಿದೆ. ಈ ಯೋಜನೆಯ ಮೂಲಕ ಪ್ರತಿ ಮಹಿಳೆಯು ತನ್ನ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಗುಣಮಟ್ಟದ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗುತ್ತದೆ.

ಕಿಂಡರ್ ಮಾ ಜೀವನ ಉದ್ಘಾಟನಾ ಕಾರ್ಯಕ್ರಮವು ಫೆ.13 ರಂದು ವೈಟ್ ಫೀಲ್ಡ್ ಮುಖ್ಯರಸ್ತೆಯ ಎಸ್ ಕೆಜಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ, ಮಹದೇವಪುರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಮತ್ತು ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಸೇರಿದಂತೆ ಗೌರವಾನ್ವಿತ ಅತಿಥಿಗಳು ಆಗಮಿಸಲಿದ್ದಾರೆ.

ಈ ಕುರಿತಾಗಿ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಿಂಡೋರಮಾ ಹೆಲ್ತ್ ಕೇರ್ ಲಿಮಿಟೆಡ್ ಪ್ರೈವೇಟ್ ಲಿಮಿಟೆಡ್‌ನ ಅಧ್ಯಕ್ಷರಾದ ಡಾ. ವಿ.ಕೆ.ಪ್ರದೀಪ್ ಕುಮಾರ್ ಮಾತನಾಡಿ, "ಕಿಂಡರ್ ಮಾ ಜೀವನವು ಆರೋಗ್ಯಕರ ಸಮಾಜವನ್ನು ನಿರ್ಮಾಣದ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಲು ಮುಂದಾಗಿದೆ. ಉಚಿತ ಸ್ತ್ರೀರೋಗ ಶಸ್ತ್ರಚಿಕಿತ್ಸಾ ಸೇವೆಯನ್ನು ನೀಡುವ ಮೂಲಕ ನಾವು ಸಶಕ್ತ ಮಹಿಳಾ ಸಮಾಜ ನಿರ್ಮಿಸುವ ಆಶಯ ಹೊಂದಿದ್ದೇವೆ. ಆರ್ಥಿಕವಾಗಿ ಹಿಂದುಳಿದ ವರ್ಗದ ಮಹಿಳೆಯರ ಆರೋಗ್ಯ ಮತ್ತು ಯೋಗಕ್ಷೇಮದ ದೃಷ್ಟಿಯಿಂದ ಈ ಯೋಜನೆಯನ್ನು ಹಾಕಿಕೊಂಡಿದ್ದೇವೆ",  ಕಿಂಡೋರಮಾ ಟ್ರಸ್ಟ್ ನಿಂದ ಒಟ್ಟು 2 ಕೋಟಿಯಷ್ಟು    ಉಚಿತ ಚಿಕಿತ್ಸೆ ಗೆ ನೀಡಲಾಗಿದ್ದು, ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತವಾಗಿ ಚಿಕಿತ್ಸೆ ಜೊತೆಗೆ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗುತ್ತದೆ ಎಂದು ತಿಳಿಸಿದರು.

ಕಿಂಡೋರಮಾ ಹೆಲ್ತ್ ಕೇರ್ ಪ್ರೈವೇಟ್ ಲಿಮಿಟೆಡ್ ಗ್ರೂಪ್ ಸಿಇಒ ರೆಂಜಿತ್ ಕೃಷ್ಣನ್ ಮಾತನಾಡಿ, 'ಕಿಂಡರ್ ಮಾ ಜೀವನವು ಸಮುದಾಯಕ್ಕೆ ಸೇವೆ ಸಲ್ಲಿಸುವ ನಮ್ಮ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಈ ಯೋಜನೆಯ ಮೂಲಕ ನಾವು ಮಹಿಳೆಯರ ಜೀವನದಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.

ಕಿಂಡರ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಅಪರ್ಣಾ ಪಾಟೀಲ್ ಮಾನತಾಡಿ, 'ಕಿಂಡರ್ ಮಾ ಜೀವನ ಯೋಜನೆಯು ಮಹಿಳೆಯರ ಆರೋಗ್ಯದ ಸಮಸ್ಯೆಗಳನ್ನುಪರಿಹರಿಸುವುದು ಮಾತ್ರವಲ್ಲದೆ ಉಚಿತ ಸ್ತ್ರೀರೋಗ ಶಸ್ತ್ರಚಿಕಿತ್ಸೆ ಮತ್ತು ಇತರ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ಒದಗಿಸುವ ಮೂಲಕ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. ಈ ಮೂಲಕ ನಾವು ಆರೋಗ್ಯಕರ ಮತ್ತು ಸಂತೋಷದಾಯಕ ಸಮಾಜಕ್ಕೆ ಅಡಿಪಾಯವನ್ನು ಹಾಕುತ್ತಿದ್ದೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಿಂಡರ್ ಆಸ್ಪತ್ರೆಯ ಮುಖ್ಯ ಆಡಳಿತ ಅಧಿಕಾರಿ ಸುದೀಂದ್ರ .ಜಿ. ಭಟ್ ಕೂಡ ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯ