ಪರೀಕ್ಷೆ ಬರೆಯುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್ಸುಗಳಲ್ಲಿ ಉಚಿತ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಪರೀಕ್ಷೆ-1ರಂದು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ದಿನಾಂಕ 18-03-2026 ರಿಂದ 02-04-2026 ರವರೆಗೆ ನಡೆಯಲಿದ್ದು, ಕ.ರಾ.ರ.ಸಾ ನಿಗಮವು, ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, “ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಕೋರಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.