LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನ. 14 ರಿಂದ 20ರ ವರೆಗೆ ಅಖಿಲ ಭಾರತ ಸಹಕಾರ ಸಪ್ತಾಹ : ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನವೆಂಬರ್ 14 ರಿಂದ 20ರ ವರೆಗೆ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮನ್ನು ಪ್ರತಿ ವರ್ಷದಂತೆ ಈ ವರ್ಷವು ಸಹ ಹಮ್ಮಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ತಿಳಿಸಿದರು.

ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕುರಿತ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಈ ದೇಶದ ಪ್ರಧಾನ ಮಂತ್ರಿ ಜವಹರ್ ಲಾಲ್ ನೆಹರು ಹುಟ್ಟು ಹಬ್ಬದ ಅಂಗವಾಗಿ ರಾಜ್ಯದಲ್ಲಿ ಎಲ್ಲಾ ಸಹಕಾರಿಗಳು ಸೇರಿ ಹಬ್ಬದ ರೀತಿಯಲ್ಲಿ ಸಹಕಾರ ಸಪ್ತಾಹವನ್ನು ಆಚರಿಸಲಾಗುವುದು ಎಂದರು.

ಏಳು ದಿನ ನಡೆಯುವ ಈ ಸಹಕಾರ ಸಪ್ತಾಹದಲ್ಲಿ ಪ್ರತಿ ದಿನ ಸಹಕಾರಿ ಸಪ್ತಾಹದ ಬಗ್ಗೆ ಪ್ರಸ್ತಾಪಿಸಿ, ಪರಿಣಿತರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು ಹಾಗೂ ರಾಜ್ಯದ ಹಿರಿಯ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ರಾಜ್ಯದ ಸಹಕಾರಿಗಳು ಉನ್ನತ ಮಟ್ಟದಲ್ಲಿ ರಾಜ್ಯದ ಜನತೆಯ ಸೇವೆ ಮಾಡಬೇಕು. ಎಲ್ಲಾ ಗ್ರಾಮದವರಿಗೂ ಸಹಕಾರ ಸಪ್ತಾಹದ ಬಗ್ಗೆ ಅರಿವು ಮೂಡಿಸಬೇಕು. ಸಹಕಾರಿ ಆಂದೋಲನ ಜನರ ಆಂದೋಲನವಾಗಿ ಪರಿವರ್ತನೆಯಾಗಬೇಕೆಂದರು.

ಕಾರ್ಯಕ್ರಮಕ್ಕೆ ಸರ್ಕಾರ ಹಣವನ್ನು ವೆಚ್ಚ ಮಾಡುವುದಿಲ್ಲ. ಸಹಕಾರಿಗಳೇ ಕಾರ್ಯಕ್ರಮದ ವೆಚ್ಚವನ್ನು ಭರಿಸಿ ಕಾರ್ಯಕ್ರಮ ಆಯೋಜಿಸಲಿರುವರು. ಈ ಸಹಕಾರ ಸಪ್ತಾಹದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಸಹ ಭಾಗವಹಿಸಲಿದ್ದು, ಕಾರ್ಯಕ್ರಮದ ಸ್ಥಳವನ್ನು ಮುಂದಿನ ದಿನÀದಲ್ಲಿ ತಿಳಿಸಲಾಗುವುದು ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಶಾಸಕರು, ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST