LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇನ್ಮುಂದೆ ಮೈಸೂರು–ಅಜ್ಮೀರ್–ಮೈಸೂರು ವಿಶೇಷ ಎಕ್ಸ್‍ಪ್ರೆಸ್ ಸೇವೆಗಳ ವಿಸ್ತರಣೆ

ಚಿತ್ರದುರ್ಗ : ರೈಲು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸುವ ಸಲುವಾಗಿ ಮೈಸೂರು-ಅಜ್ಮೀರ್-ಮೈಸೂರು ವಿಶೇಷ ಎಕ್ಸ್‍ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.

ರೈಲು ಸಂಖ್ಯೆ 06281 ಮೈಸೂರು–ಅಜ್ಮೀರ್ ವಿಶೇಷ ಎಕ್ಸ್‍ಪ್ರೆಸ್ ರೈಲು ಈ ಮೊದಲು ನವೆಂಬರ್ 29ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು. ಈಗ ಇದರ ಸಂಚಾರವನ್ನು 2025ರ ಡಿಸೆಂಬರ್ 6 ರಿಂದ 2026ರ ಜನವರಿ 31 ರವರೆಗೆ ವಿಸ್ತರಿಸಲಾಗಿದೆ. ಇದು ಪ್ರತಿ ಶನಿವಾರದಂದು ಸಂಚರಿಸಲಿದೆ.

ಅದೇ ರೀತಿ, ರೈಲು ಸಂಖ್ಯೆ 06282 ಅಜ್ಮೀರ್–ಮೈಸೂರು ವಿಶೇಷ ಎಕ್ಸ್‍ಪ್ರೆಸ್ ಈ ರೈಲು ಡಿಸೆಂಬರ್ 1ರವರೆಗೆ ಚಲಿಸಲು ನಿಗದಿಯಾಗಿತ್ತು. ಈಗ ಇದರ ಸಂಚಾರವನ್ನು 2025ರ ಡಿಸೆಂಬರ್ 8 ರಿಂದ 2026ರ ಫೆಬ್ರವರಿ 2ರವರೆಗೆ ವಿಸ್ತರಿಸಲಾಗಿದೆ. ಇದು ಪ್ರತಿ ಸೋಮವಾರದಂದು ಸಂಚರಿಸಲಿದೆ.

ಈ ವಿಶೇಷ ರೈಲುಗಳು ತಮ್ಮ ಅಸ್ತಿತ್ವದಲ್ಲಿರುವ ಸಮಯ, ನಿಲುಗಡೆಗಳು ಮತ್ತು ಕೋಚ್ ಸಂಯೋಜನೆಯೊಂದಿಗೆ ಮುಂದುವರಿಯಲಿವೆ.  ಈ ರೈಲುಗಳು ಹಾಸನ, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮಂಟ್, ಹೊಸಪೇಟೆ ಜಂಕ್ಷನ್, ಕೊಪ್ಪಳ, ಗದಗ, ಎಸ್‍ಎಸ್‍ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ಗೋಕಾಕ್ ರಸ್ತೆ, ಘಟಪ್ರಭಾ, ರಾಯಬಾಗ, ಕುಡಚಿ, ಮಿರಜ್, ಸಾಂಗ್ಲಿ, ಪುಣೆ, ಲೋನಾವಾಲಾ, ಕಲ್ಯಾಣ್, ವಸಾಯಿ ರೋಡ್, ಸೂರತ್, ವಡೋದರಾ, ರತ್ನಾಂ, ಮಂದಸೋರ್, ನಿಮಾಚ್, ಚಿತ್ತರ್ಗಡ್, ಭಿಲ್ವಾರಾ, ಬಿಜೈನಗರ, ನಾಸಿರಾಬಾದ್ ನಿಲ್ದಾಣದ ಮೂಲಕ ಅಜ್ಮೀರ್  ತಲುಪಲಿದೆ.

ಹೆಚ್ಚಿನ ಮಾಹಿತಿಗಾಗಿ, ಹತ್ತಿರದ ರೈಲು ನಿಲ್ದಾಣದ ವಿಚಾರಣಾ ಕೇಂದ್ರಕ್ಕೆ ಭೇಟಿ ನೀಡಬಹುದಾಗಿದ್ದು, ಸಹಾಯವಾಣಿ ಸಂಖ್ಯೆ 139 ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026