ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಜ್ಞಾನ ಬಾ, ಮಾಯೆ ಹೋಗೆಂದು ಕಳುಹುತ್ತಿದ್ದೇನೆ.
ಅರಿವು ಬಾ, ಅಜ್ಞಾನ ಹೋಗೆಂದು ಕಳುಹುತ್ತಿದ್ದೇನೆ.
ನಿಃಕಲ ಬಾ, ಸಕಲ ಹೋಗೆಂದು ಕಳುಹುತ್ತಿದ್ದೇನೆ.
ನಿಃಪ್ರಪಂಚ ಬಾ, ಪ್ರಪಂಚ ಹೋಗೆಂದು ಕಳುಹುತ್ತಿದ್ದೇನೆ.
ಕೂಡಲಸಂಗಮದೇವರಲ್ಲಿ ಬಸವಣ್ಣನ ಬಲ್ಲವರನೊಳಗೆ ಕೂಡಿಅರಿಯದವರ ಹೊರಗೆ ತಡೆವುತ್ತಿದ್ದೇನೆ.
-ಉಗ್ಘಡಿಸುವ ಗಬ್ಬಿದೇವಯ್ಯ