ಹಾವೇರಿ: ಬೆಂಗಳೂರಿನಿಂದ ಗದಗ ನಗರಕ್ಕೆ ತೆರಳುತ್ತಿದ್ದ ಪಲ್ಲಕ್ಕಿ ಬಸ್‌ಗೆ (Pallakki Bus) ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣ ಸುಟ್ಟುಹೋಗಿದ ಘಟನೆ ಹಾವೇರಿ (Haveri) ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದರೂ ದೊಡ್ಡ ಅನಾಹುತ ತಪ್ಪಿದ್ದು, ಚಾಲಕನ (Bus Driver) ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗ ಕಡೆಗೆ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್‌ನಲ್ಲಿ ಸುಮಾರು 17ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬ್ರೇಕ್ ಲೈನ್ ದೋಷವೇ ಈ ಬೆಂಕಿ ಅವಘಡಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಬಸ್ ಚಾಲಕ ಪಕ್ಕೀರಪ್ಪ ಬೆಂಕಿ ಆರಿಸಲು ಶ್ರಮಪಟ್ಟಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.