E-PAPER
16 Nov 2026, 02:19:33 AM|
Gold₹13605/gGold24K ₹13,605/g - 22K ₹12,460/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಂಜೇಶ್ವರ ಗೋವಿಂದ ಪೈ ಅದ್ಬುತ ಪ್ರತಿಭೆ ; ಗಣೇಶ್ ಕಾಸರಗೋಡು

ಕಾಸರಗೋಡು :ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಓರ್ವ ಮಹಾನ್ ವ್ಯಕ್ತಿ, ಅದ್ಭುತ ಪ್ರತಿಭೆ, ಕಾವ್ಯ ಮತ್ತು ಸಂಶೋಧನೆಯನ್ನು ಸವ್ಯಸಾಚಿಸಿದವರು. ಅವರ ಹೆಸರಿನಲ್ಲಿ ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಸ್ಥಾಪಿಸಿದ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಬದುಕಿನ ಮಹಾ ಭಾಗ್ಯ ಎಂದು ಚಲನ ಚಿತ್ರ ಸಾಹಿತಿ, ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಹೇಳಿದರು. ಕನ್ನಡ ಭವನದ ರಜತ ವರ್ಷಾಚರಣೆ ಪ್ರಯುಕ್ತ ಕನ್ನಡ ಭವನ ವೇದಿಕೆಯಲ್ಲಿ ನಡೆದ ಗಣೇಶ ಚತುರ್ಥಿ ವಿಶೇಷ ಕಾರ್ಯಕ್ರಮದಲ್ಲಿ "ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2025."ಸ್ವೀಕರಿಸಿ ಅವರು ಮಾತನಾಡಿದರು.
   ರಾಷ್ಟ್ರಕವಿಗಳ ಜೀವನ ಸಾಧನೆಯ ಕುರಿತು ಚಲನ ಚಿತ್ರವೊಂದು ನಿರ್ಮಾಣವಾಗಲಿದ್ದು ಅದರ ಸಿದ್ಧತೆಯ ನಡುವೆ ಮಹಾಕವಿಗಳ ಹೆಸರಿನ ಪ್ರಶಸ್ತಿಯನ್ನು ಸಂತೋಷದಿಂದ ಹಾಗೂ ಹೆಮ್ಮೆಯಿಂದ ಸ್ವೀಕರಿಸಿದ್ದೇನೆ ಎಂದು ಗಣೇಶ್ ಕಾಸರಗೋಡು ಹೇಳಿದರು. ಕ. ಸಾ. ಪ. ಕೇರಳ ಗಡಿನಾಡ ಘಟಕ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೋಟ್ಟೆತೋಡಿ ಅಧ್ಯಕ್ಷತೆ ವಹಿಸಿದ್ದರು.  ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ನಿರ್ದೇಶಕ ಡಾ. ವೆಂಕಟ್ರಮಣ ಹೊಳ್ಳ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಪ್ರಶಸ್ತಿ ಪ್ರದಾನ ಬಳಿಕ ಗಣೇಶ್ ಕಾಸರಗೋಡು ದಂಪತಿಗಳನ್ನು ಗೌರವಿಸಲಾಯಿತು. ಕನ್ನಡ ಭವನ ಮತ್ತು ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕ ಸಂಚಾಲಕರಾದ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಉದ್ಘಾಟಿಸಿದರು. ಗಡಿನಾಡ ಚೇತನ ಪ್ರಶಸ್ತಿ ಪುರಸ್ಕೃತ ರಾಧಾಕೃಷ್ಣ ಕೆ ಉಳಿಯತಡ್ಕ ಅಭಿನಂದನಾ ಭಾಷಣ ಮಾಡಿದರು.ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಪು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಪತ್ರಕರ್ತ ಜಗನ್ನಾಥ್ ಶೆಟ್ಟಿ, ಜನಪ್ರಿಯೆ ವೈದ್ಯೆ ಡಾ ಸುಜಯಾ ಪಾಂಡ್ಯ, ಶುಭ ಹಾರೈಸಿದರು. ಕನ್ನಡ ಭವನದ ನಿರ್ದೇಶಕ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು
     ಜಾನಪದ ಕಲಾವಿದೆ ಸುಭಾಷಿನಿ ಚಂದ್ರ ಕಣ್ಣೆಟಿಪಾರೆ ತಂಡದಿಂದ ಜಾನಪದ ನ್ರಿತ್ಯ, ಭಕ್ತಿ ಭಾವಗೀತೆ, ಪಾಡ್ದನ ಗಾಯನ ಜರಗಿತು. ಸುಭಾಷಿನಿ ಜತೆ ಸರಸ್ವತಿ, ಪ್ರೇಮ, ಸೌಮ್ಯ ಕೆ. ಏನ್, ಸನ್ವಿತ ಬಿ.,ಸೌಮ್ಯ ಬಿ ಎಸ್, ಸುಕನ್ಯ ಬಿ. ಎಸ್,ಪಾಲ್ಗೊಂಡಿದ್ದರು. ಎಲ್ಲಾ ಕಲಾವಿದರೀಗೆ ಸ್ಮರಣಿಕೆ, ಪ್ರಮಾಣ ಪತ್ರ, ನೀಡಿ ಅಭಿನಂದಿಸಲಾಯಿತು. ಸಂಘಟನಾ ಕಾರ್ಯದರ್ಶಿ ರಾಜೇಶ್ ಕೋಟೆಕಣಿ ಸ್ವಾಗತಿಸಿ, ಕಾರ್ಯದರ್ಶಿ ವಸಂತ್ ಕೆರೆಮನೆ ವಂದಿಸಿದರು. ಗಣೇಶ್ ಹಬ್ಬದ ವಿಶೇಷ ಉಪಚಾರ ಸಂದ್ಯಾ ರಾಣಿ ಟೀಚರ್ ನಿರ್ವಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ ಜಿನದತ್ತ ದೇಸಾಯಿಯವರ ಬದುಕು ಬರಹ ನಮಗೆಲ್ಲ ಮಾದರಿ- ಪ್ರಾ ಬಿ ಎಸ್ ಗವಿಮಠ CCEA ಮತ್ತು ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿಅಂಜುಮನ್ ಪದವಿ ಕಾಲೇಜಿಗೆ ಚಾಂಪಿಯನಶಿಪ್‌ ಪ್ರಶಸ್ತಿಉತ್ತರ ಕರ್ನಾಟಕದ ಹಿರಿಯ ರಾಜಕೀಯ ಮುತ್ಸದ್ದಿ , ಮಾಜಿ ಸಚಿವ, ಶಿವಾನಂದ ಕೌಜಲಗಿ ಲಿಂಗೈಕ್ಯರಾಗಾಆವಿವಿ, ವಿಧಾನಸೌಧ ಸೇರಿದಂತೆ ಪ್ರಮುಖ ಸರ್ಕಾರಿ ಹಾಗೂ ಐತಿಹಾಸಿಕ ಕಟ್ಟಡಗಳಿಗೆ ಪಿಂಕ್ ಲೈಟಿಂಗ್ : ಕುಲಪತಿ ಡಾ.ಭಗವಾನ್ ಬಿ.ಸಿಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerರಾಜಾ ಲಖಮಗೌಡರು, ಶಿರಸಂಗಿ ಲಿಂಗರಾಜರು ಮತ್ತು  ಪಾಟೀಲ ಪುಟ್ಟಪ್ಪ ಭಾವ ಚಿತ್ರಗಳನ್ನು ಆಹ್ವಾನ ಪತ್ರಿಕೆಗಳಲ್ಲಿ ಮುದ್ರಿಸಬೇಕು ; ಡಾ.ಸರಜೂ ಕಾಟ್ಕರಭ್ರಷ್ಟಾಚಾರ ರಹಿತ ಸಮ ಸಮಾಜ ನಿರ್ಮಾಣ ಶರಣರ ತತ್ವಗಳಿಂದ ಮಾತ್ರ ಸಾಧ್ಯ ; ಡಾ.ಬಸವರಾಜ ಹುಲಮನಿನಿಯಮ ಉಲ್ಲಂಘಿಸುವ ಹೋಟೆಲ್, ಪಬ್, ಡಾಬಾಗಳ ವಿರುದ್ಧ ಕಠಿಣ ಕ್ರಮ: ಪೊಲೀಸ್ ಕಮಿಷನರ್ ನಿಕ್ಕಂ ಎಚ್ಚರಿಕೆಜೆಎಲ್ಎಂ ಕಚೇರಿಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ