Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಗಂಗಾವತಿ ಕೈ ಟಿಕೆಟ್ ಇಕ್ಬಾಲ್ ಅನ್ಸಾರಿಗೆ ಘೋಷಣೆ 

ಸುದ್ದಿಮೂಲ ವಾರ್ತೆ ,

ಸುದ್ದಿಮೂಲವಾರ್ತೆ ಗಂಗಾವತಿ,ಏ.೬- ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಗೆ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಘೋಷಿಸಿದ್ದರ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬಣದಲ್ಲಿ ಗುರುತಿಸಿಕೊಂಡಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಆರ್.ಶ್ರೀನಾಥ್ ಮತ್ತು ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪರ ಬಣಕ್ಕೆ ನಿರಾಸೆಯೊಂದಿಗೆ ಹಿನ್ನೆಡೆ ಉಂಟಾಗಿದೆ.



ಈ ಬಾರಿ ಗಂಗಾವತಿ ವಿಧಾನ ಸಭಾ ಕ್ಷೇತ್ರದಿಂದ ಇಕ್ಬಾಲ್ ಅನ್ಸಾರಿ, ಹೆಚ್.ಆರ್.ಶ್ರೀನಾಥ್ ಹಾಗೂ ಮಲ್ಲಿಕಾರ್ಜುನ ನಾಗಪ್ಪ ಈ ಮೂವರು ಕಾಂಗ್ರೆಸ್ ಟಿಕೆಟ್‌ಗೆ ಅರ್ಜಿ ಸಲ್ಲಿಸಿ ಪ್ರಬಲ ಆಕಾಂಕ್ಷಿಗಳಾಗಿದ್ದರು. ಇಕ್ಬಾಲ್ ಅನ್ಸಾರಿಯ ಒಂದು ಬಣ ಮತ್ತು ಹೆಚ್.ಆರ್. ಶ್ರೀನಾಥ್ ಹಾಗೂ ಮಲ್ಲಿಕಾರ್ಜುನ ನಾಗಪ್ಪರವರ ಒಂದು ಬಣಗಳಾಗಿ ಗಂಗಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ಈವರೆಗೂ ಪಕ್ಷದ ವೇದಿಕೆ ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಈ ಎರಡೂ ಬಣಗಳು ಪ್ರತ್ಯೇಕವಾಗಿ ನಡೆಸಿವೆ.

ಇಕ್ಬಾಲ್ ಅನ್ಸಾರಿ ನನಗೇ ಟಿಕೆಟ್ ನೀಡಬೇಕೆಂದು ಹಠಕ್ಕೆ ಬಿದ್ದಿದ್ದರು. ಗುರುವಾರ ಬೆಳಿಗ್ಗೆ ಪಕ್ಷದ ಹೈ ಕಮಾಂಡ್ ಬಿಡುಗಡೆಗೊಳಿಸಿದ ಅಭ್ಯರ್ಥಿಗಳ ದ್ವಿತೀಯ ಪಟ್ಟಿಯಲ್ಲಿ ಇಕ್ಬಾಲ್ ಅನ್ಸಾರಿ ಘೋಷಿಸಲಾಗಿದೆ. ಇತ್ತ ಹೆಚ್.ಆರ್.ಶ್ರೀನಾಥ್ ತಮಗೇ ಟಿಕೆಟ್ ಬೇಕೆಂದು ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವುಮಾರ ಹಾಗೂ ರಾಜ್ಯ ಸಭೆ ಸದಸ್ಯ ಬಿ.ಕೆ.ಹರಿಪ್ರಸಾದ್ ದಿಂಬಾಲು ಬಿದ್ದರೂ ಇವರ ಹೆಸರು ಘೋಷಣೆ ಆಗಿಲ್ಲ. ಮಲ್ಲಿಕಾರ್ಜುನ ನಾಗಪ್ಪ ಕೂಡ ಟಿಕೆಟ್ ನೀಡುವುದಾದರೆ ನನಗೆ ನೀಡಿ ಇಲ್ಲವೇ ಹೆಚ್.ಆರ್.ಶ್ರೀನಾಥ್‌ರಿಗೆ ನೀಡಿ ಇಕ್ಬಾಲ್ ಅನ್ಸಾರಿಯವರಿಗೆ ಮಾತ್ರ ನೀಡಬೇಡಿ ಎಂದು ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದರು. ಆದರೆ ಮೊದಲನೆ ಹಂತದಲ್ಲಿ ಅನ್ಸಾರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಘೋಷಣೆ ಮಾಡಿಸುವಲ್ಲಿ ಯಶ ಕಂಡಿದ್ದಾರೆ.

ಅನ್ಸಾರಿ ಬಣ ಒಂದಾದರೆ ಹೆಚ್. ಆರ್. ಶ್ರೀನಾಥ್, ಮಲ್ಲಿಕಾರ್ಜುನ ಇವರದು ಒಂದು ಬಣ ಇದ್ದು, ಈವೆಗೂ ಈ ಎರಡೂ ಬಣಗಳು ಹಾವು-ಮುಂಗುಸಿಯಂತಿವೆ. ಈಗ ಅನ್ಸಾರಿಗೆ ಹೈಕಮಾಂಡ್ ಟಿಕೇಟ್ ಘೋಷಿಸಿದಂತೆ ಕೊನೆ ಘಟ್ಟದಲ್ಲಿ ಬಿ ಫಾರ್ಮ್ ಅನ್ಸಾರಿಗೆ ನೀಡಿದ್ದೇಯಾದರೆ, ಹೆಚ್.ಆರ್.ಶ್ರೀನಾಥ್ ಮತ್ತು ಮಲ್ಲಿಕಾರ್ಜುನ ನಾಗಪ್ಪರ ಬಣದ ಮುಂದಿನ ನಿಲುವು ಬದಲಾಗುವ ಸಾಧ್ಯತೆಯಿದೆ. ಕಾಂಗ್ರೆಸ್ಸಿನಲ್ಲಿದ್ದುಕೊಂಡೇ ಅನ್ಸಾರಿ ಸೋಲಿಸುವ ಒಳ ತಂತ್ರಗಾರಿಕೆ ನಡೆಸಬಹುದು. ಇಲ್ಲವೇ ಕಾಂಗ್ರೆಸ್ ತೊರೆದು ಬೇರೆ ಪಕ್ಷ ಸೇರುಬಹುದು ಯಾವುದಕ್ಕೂ ಕಾದು ನೋಡಬೇಕಷ್ಟೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ