LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಗಂಗೂಬಾಯಿ ಹಾನಗಲ್ ಅವರ ಜನ್ಮ ಸ್ಥಳ ಗಂಗೋತ್ರಿಗೆ ಭೇಟಿ ನೀಡಿ, ಅಭಿವೃದ್ಧಿಯ ಬಗ್ಗೆ ಚರ್ಚಿಸಿದ ಜಿಲ್ಲಾಧಿಕಾರಿ ದಿವ್ಯ ಪ್ರಭು*





*ಧಾರವಾಡ ಆ.20:* ಗಾನವಿದೂಷಿ ಗಂಗೂಬಾಯಿ ಹಾನಗಲ್ ಅವರ ಜನ್ಮಸ್ಥಳವಾದ ನಗರದ ಹೊಸಯಲ್ಲಾಪೂರ ಓಣಿಯ ಗಂಗೋತ್ರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು (ಆ.20) ಭೇಟಿ ನೀಡಿ, ಗಂಗೂಬಾಯಿ ಹಾನಗಲ್ ಅವರ ಹುಟ್ಟಿದ ಮನೆ ಅಭಿವೃದ್ಧಿಪಡಿಸುವ ಕುರಿತು ಸ್ಥಳೀಯರು, ಜನಪ್ರತಿನಿಧಿಗಳು ಹಾಗೂ ಸಂಗೀತ ಕಲಾವಿದರೊಂದಿಗೆ ಸ್ಥಳದಲ್ಲಿ ಚರ್ಚಿಸಿದರು.



ಅವರು ಮಾತನಾಡಿ, ಧಾರವಾಡ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಮೆರೆಸಿದ ನಮ್ಮ ಜಿಲ್ಲೆಯ ಹೆಮ್ಮೆಯ ಪುತಿ,್ರ ಸಂಗೀತ ಸುಧೆ ಪದ್ಮವಿಭೂಷಣ ಪುರಸ್ಕøತ ದಿ. ಗಂಗೂಬಾಯಿ ಹಾನಗಲ್ ಅವರನ್ನು ಸ್ಮರಣೀಯಗೊಳಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.



ಸಂಗೀತ, ಸಾಹಿತ್ಯ, ಚಿತ್ರಕಲೆ ಮತ್ತು ವೃತ್ತಿ ರಂಗಭೂಮಿಯಲ್ಲಿ ಧಾರವಾಡದ ಪ್ರಸಿದ್ಧಿಯನ್ನು ಅನೇಕ ಕಲಾವಿದರು ದಾಖಲಿಸಿದ್ದಾರೆ. ಅವರ ಕೊಡುಗೆ ಮತ್ತು ಸಾಧನೆಯನ್ನು ನಾವು ಸ್ಮರಿಸುವುದು ಮತ್ತು ಅದನ್ನು ಮುಂದಿನ ಪೀಳಿಗೆಗೆ ಮುಂದುವರೆಸಲು ಅಗತ್ಯ ಸೌಲಭ್ಯ, ಅವಕಾಶಗಳನ್ನು ಮಾಡಿಕೊಡುವುದು ನಮ್ಮ ಕರ್ತವ್ಯವಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಮತ್ತು ಇತರ ಉದ್ಯಮಗಳ ಆರ್ಥಿಕ ನೆರವಿನಲ್ಲಿ ಗಂಗೋತ್ರಿಯನ್ನು ಅಭಿವೃದ್ಧಿಪಡಿಸಿ, ಸಂಗೀತ ಕಾರ್ಯ ಚಟುವಟಿಕೆಗಳು ನಿರಂತರವಾಗಿ ನಡೆಯುವಂತೆ ಮಾಡಲು ಜಿಲ್ಲಾಡಳಿತದಿಂದ ಒಂದು ಮುನ್ನೋಟದ ರೂಪರೇಷಗಳನ್ನು ಸಿದ್ಧಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.



ಈಗೀರುವ ಗಂಗೋತ್ರಿಯ ಜಾಗ ಚಿಕ್ಕದಾಗಿರುವದರಿಂದ ಅಕ್ಕಪಕ್ಕದ ಖಾಲಿ ಜಾಗೆಗಳನ್ನು ಪಡೆಯುವ ಕುರಿತು ಅವುಗಳ ಮಾಲೀಕರೊಂದಿಗೆ ಸಂಪರ್ಕಿಸಲಾಗುವುದು. ಒಪ್ಪಿದಲ್ಲಿ ಆ ಜಾಗೆಗಳನ್ನು ಸಹ ಉಪಯೋಗಿಸಿಕೊಂಡು ಉತ್ತಮವಾದ ಸಂಗೀತ-ಸಾಂಸ್ಕøತಿಕ ಭವನ ಹಾಗೂ ನಿರಂತರವಾಗಿ ಸಂಗೀತ ಪಾಠಶಾಲೆಗಳು ನಡೆಯುವಂತೆ ಮಾಡಲಾಗುವುದು. ಸ್ಥಳೀಯ ಕಲಾವಿದರ, ಸಂಗೀತಗಾರರ ಸಹಕಾರದಿಂದ ನಿರಂತರವಾಗಿ ಸಂಗೀತ ಸಭೆಗಳು ಜರಗುವಂತೆ ಯೋಜಿಸಲಾಗುವುದು. ಹಾಗೂ ಪದ್ಮವಿಭೂಷಣ ಗಂಗೂಬಾಯಿ ಹಾನಗಲ್ ಅವರ ಕಿರಾಣಾ ಘರನಾ ಸಂಗೀತವನ್ನು ಮುಂದುವರೆಸುವ ಆಸಕ್ತರಿಗೆ ಪ್ರೋತ್ಸಾಹಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.



ಗಂಗೋತ್ರಿಯನ್ನು ಉಪಯುಕ್ತವಾಗಿ ಮಾಡಲು ಕಲಾವಿದರ, ಸಂಗೀತಗಾರರ ಹಾಗೂ ಸ್ಥಳೀಯರ, ಜನಪ್ರತಿನಿಧಿಗಳ ಸಲಹೆ ಹಾಗೂ ಮಾಹಿತಿಯನ್ನು ಪಡೆದುಕೊಳ್ಳಬೇಕು. ಗಂಗೋತ್ರಿಯನ್ನು ಸ್ಮಾರಕವಾಗಿಸಲು ಅಗತ್ಯ ನೀಲನಕ್ಷೆಯನ್ನು ಅಂದಾಜು ವೆಚ್ಚದ ಪಟ್ಟಿಯೊಂದಿಗೆ ಸರ್ಕಾರಕ್ಕೆ ಹಾಗೂ ಸಿಎಸ್ಆರ್ ನೆರವಿಗಾಗಿ ಸಲ್ಲಿಸಲು ಅಗತ್ಯ ಪ್ರಸ್ತಾವನೆಯನ್ನು ತಯಾರಿಸಿ, ಒಂದು ವಾರದಲ್ಲಿ ಜಿಲ್ಲಾಡಳತಕ್ಕೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಈ ಸಂದರ್ಭದಲ್ಲಿ ಅವರು ಸೂಚಿಸಿದರು.



ಇದು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುವ ಪವಿತ್ರ ತಾಣವಾಗಬೇಕು. ಆದ್ದರಿಂದ ಸರ್ಕಾರದ ಸಹಕಾರದೊಂದಿಗೆ ಈ ಮನೆಯನ್ನು ಪುನರ್ನಿರ್ಮಿಸಬೇಕು ಎಂದು ಸಾರ್ವಜನಿಕರು ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗಳ ಭೇಟಿ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯ ಶಂಕರ ಶಳಕೆ, ಹಿರಿಯ ನ್ಯಾಯವಾದಿ ಅರುಣ ಚರಂತಿಮಠ, ಕಲಾವಿದ ಪ್ರಸನ್ನ ಗುಡಿ, ಡಾ. ಶಶೀಧರ ನರೇಂದ್ರ, ರಾಘವೇಂದ್ರ ಗುಡಿ, ಸಂಗೀತ ಕಲಾವಿದೆ ಭಾರ್ಗವಿ ಗುಡಿ, ವೀರಣ್ಣ ಪತ್ತಾರ, ಉದಯ ಯಂಡಿಗೇರಿ, ಅಣ್ಣಪ್ಪ ಪಾಲನಕರ, ಸಮೀರ ಜೋಶಿ, ಸಂಜೀವ ಲಕ್ಕಮನಹಳ್ಳಿ ಸೇರಿದಂತೆ ಗಂಗೂಬಾಯಿ ಹಾನಗಲ್ ಅವರ ಅನುಯಾಯಿಗಳು, ಅಭಿಮಾನಿಗಳು, ಸಂಗೀತ ಸೇವಕರು, ಸಂಗೀತಾಸಕ್ತರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು