LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸವರ್ಷಕ್ಕೆ ಬೆಂಗಳೂರಿಗೆ ಕಸದ ಗಿಫ್ಟ್, ತೆರವು

ಬೆಂಗಳೂರು: ನಗರದಲ್ಲಿ ಪೂರ್ವ ವಲಯ ವ್ಯಾಪ್ತಿಯಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 8 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ.

ಹೊಸ ವರ್ಷಾಚರಣೆಯ ಹಿನ್ನೆಲೆ ನಗರದ ಸಿಬಿಡಿ ರಸ್ತೆಗಳಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರಿಸಿಡೆನ್ಸಿ ರಸ್ತೆ, ರಿಚ್‌ಮಂಡ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕಸ್ತೂರ್ ಬಾ ರಸ್ತ್ತೆ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ಮುಂಜಾನೆ 3.30ರಿಂದ ಸ್ವಚ್ಛತಾ ಕಾರ್ಯ ಆರಂಭಿಸಿ ಬೆಳಗ್ಗೆ 6.30ರ ವೇಳೆಗೆ ಪೂರ್ಣಗೊಳಿಸಿ ಸುಮಾರು 8 ಮೆ. ಟನ್ ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಿ ರಸ್ತೆಗಳನ್ನು ಸ್ವಚ್ಛಗೊಳಿಸಿ ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಸ್ವಚ್ಛತಾ ಕಾರ್ಯವು ಶಾಂತಿನಗರ ವಿಭಾಗದ ಘನತ್ಯಾಜ್ಯ ವಿಭಾಗದಿಂದ ಮಾಡಲಾಗಿದ್ದು, 3 ಮೇಲ್ವಿಚಾರಕರು, 80ಕ್ಕೂ ಹೆಚ್ಚು ಪೌರಕಾರ್ಮಿಕರು ಸ್ವಚ್ಛತಾ ಕಾರ್ಯವನ್ನು ಮಾಡಿದರು. ಸ್ಥಳದಲ್ಲಿ 1 ಕಾಂಪ್ಯಾಕ್ಟರ್ ಹಾಗೂ 7 ಆಟೋ ಟಿಪ್ಪರ್ ಗಳಿದ್ದವು.

ಸಿಬಿಡಿ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಎಸೆದಿದ್ದ ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ತ್ಯಾಜ್ಯ, ಚಪ್ಪಲಿಗಳು, ಮಧ್ಯದ ಬಾಟಲಿಗಳು ಸೇರಿದಂತೆ ಇನ್ನಿತರೆ ಅನುಪಯುಕ್ತ ವಸ್ತುಗಳನ್ನು ಬೇರ್ಪಡಿಸಿ ಸಂಗ್ರಸಲಾಗಿದೆ. ಪುನರ್ ಬಳಕೆಯ ಸುನಾರು 2 ಟನ್ ತ್ಯಾಜ್ಯವನ್ನು ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಕಳುಹಿಸಲಾಗಿದೆ.

ಸ್ವಚ್ಚತಾ ಕಾರ್ಯದಲ್ಲಿ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅಪ್ಪುರಾಜ್, ಘನತ್ಯಾಜ್ಯ ವಿಭಾಗದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರು