ವಿಜಯನಗರ (ಹೊಸಪೇಟೆ) ಸೆ.10: ವಿಜಯನಗರ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗರಿಮಾ ಪನ್ವಾರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ಅವರು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಒಂದು ತಂಡವಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು.
ಇನ್ನು ಮುಂದೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸಂಬAಧಿಸಿದ ಆಡಳಿತಾತ್ಮಕ ಪತ್ರ ವ್ಯವಹಾರಗಳು, ಮನವಿಗಳು ಹಾಗೂ ಅಧಿಕೃತ ಕೋರಿಕೆಗಳನ್ನು ನೂತನ ಸಿಇಒ ಗರಿಮಾ ಪನ್ವಾರ್ ಅವರ ಹೆಸರಿನಲ್ಲಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.