Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗೌರಿ-ಗಣೇಶ ಹಬ್ಬ: ಕೆಎಸ್‌ಆರ್‌ಟಿಸಿಯಿಂದ 2,400 ವಿಶೇಷ ಬಸ್‌ಗಳ ಕಾರ್ಯಾಚರಣೆ; ರಿಯಾಯಿತಿ ಘೋಷಣೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೌರಿ - ಗಣೇಶ ಹಬ್ಬದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಸ್ವಂತ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ನೆರೆ ರಾಜ್ಯಗಳಿಗೆ ಒಟ್ಟು 2,400 ಹೆಚ್ಚುವರಿ ವಿಶೇಷ ಬಸ್‌ಗಳ ಸಂಚಾರವನ್ನು ಕೆಎಸ್‌ಆರ್‌ಟಿಸಿ ಆರಂಭಿಸಿದೆ.

ಸೆಪ್ಟೆಂಬರ್ 11ರಿಂದ ಆರಂಭವಾಗಿರುವ ಈ ವಿಶೇಷ ಬಸ್ ಸೌಲಭ್ಯವು ಸೆಪ್ಟೆಂಬರ್ 12 ಹಾಗೂ 13ರವರೆಗೂ ರಾಜ್ಯ ಹಾಗೂ ಹೊರ ರಾಜ್ಯಗಳಿಗೆ ಸಂಚರಿಸಲಿದೆ. ಹಾಗೆಯೇ, ಹಬ್ಬ ಮುಗಿದ ನಂತರ ಸೆಪ್ಟೆಂಬರ್ 14ರಂದು ವಿವಿಧ ಭಾಗಗಳಿಂದ ಜನರು ಬೆಂಗಳೂರಿಗೆ ವಾಪಸ್ಸಾಗಲು ಅನುಕೂಲವಾಗುವಂತೆ ಮರಳುವ ಪ್ರಯಾಣಕ್ಕೂ ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ಬಸ್‌ಗಳ ನಿರ್ಗಮನ ಸ್ಥಳ ಹಾಗೂ ಮಾರ್ಗಗಳ ವಿವರ:
ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್): ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಪ್ರಮುಖ ಸ್ಥಳಗಳಿಗೆ ಬಸ್‌ಗಳು ಲಭ್ಯವಿರಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣ: ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಹಾಗೂ ಮಡಿಕೇರಿ ಮಾರ್ಗವಾಗಿ ವಿಶೇಷ ಬಸ್‌ಗಳು ಸಂಚರಿಸಲಿವೆ.

ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ: ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ ಹಾಗೂ ಕೋಝಿಕ್ಕೋಡ್ ಮುಂತಾದ ನಗರಗಳಿಗೆ ಪ್ರತ್ಯೇಕ ಬಸ್‌ಗಳು ಹೊರಡಲಿವೆ.

ವಿಶೇಷ ರಿಯಾಯಿತಿ ಸೌಲಭ್ಯ:
ಪ್ರಯಾಣಿಕರನ್ನು ಪ್ರೋತ್ಸಾಹಿಸಲು ಮತ್ತು ಹಬ್ಬದ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲು ನಿಗಮವು ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ.
ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದರೆ ಶೇಕಡಾ 5ರಷ್ಟು ರಿಯಾಯಿತಿ ಸಿಗಲಿದೆ.

ಹೋಗುವ ಮತ್ತು ಬರುವ ಎರಡೂ ಕಡೆಯ ಪ್ರಯಾಣದ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ, ಬರುವ ಪ್ರಯಾಣದ ದರದಲ್ಲಿ ಶೇಕಡಾ 10ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

ಪ್ರಯಾಣಿಕರಿಗೆ ಪ್ರಮುಖ ಸೂಚನೆಗಳು:
ಪ್ರಯಾಣಿಕರು ನಿಲ್ದಾಣಗಳಿಗೆ ತೆರಳುವ ಮುನ್ನ ತಮ್ಮ ಟಿಕೆಟ್‌ನಲ್ಲಿ ನಮೂದಿಸಿರುವ ಬಸ್ ನಿಲ್ದಾಣ ಅಥವಾ ಪಿಕ್‌ಅಪ್ ಪಾಯಿಂಟ್‌ಗಳನ್ನು ಸರಿಯಾಗಿ ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಕರ್ನಾಟಕ ಸೇರಿದಂತೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಮತ್ತು ಪುದುಚೇರಿ ರಾಜ್ಯಗಳ ಪ್ರಮುಖ ನಗರಗಳಲ್ಲಿರುವ ನಿಗಮದ ಮುಂಗಡ ಆಸನ ಕಾಯ್ದಿರಿಸುವ ಕೌಂಟರ್‌ಗಳಲ್ಲಿಯೂ ಟಿಕೆಟ್ ಪಡೆಯಬಹುದು.

ಹೆಚ್ಚುವರಿ ಸಾರಿಗೆಯ ವೇಳಾಪಟ್ಟಿ ಹಾಗೂ ಇ-ಟಿಕೆಟ್ ಬುಕ್ಕಿಂಗ್‌ಗಾಗಿ ನಿಗಮದ ಅಧಿಕೃತ ವೆಬ್‌ಸೈಟ್ ksrtc.karnataka.gov.in ಅಥವಾ ksrtc.in ಗೆ ಭೇಟಿ ನೀಡಬಹುದು. ನಿಗಮದ ವ್ಯಾಪ್ತಿಯ ಎಲ್ಲಾ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದಲೂ ಪ್ರಯಾಣಿಕರ ಒತ್ತಡಕ್ಕೆ ತಕ್ಕಂತೆ ಸ್ಥಳೀಯವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ನಡೆಯಲಿದೆ.

ಖಾಸಗಿ ಬಸ್ ದರ ಏರಿಕೆ ಬಿಸಿ: ಇತ್ತ ಸರ್ಕಾರಿ ಸಾರಿಗೆಯು ರಿಯಾಯಿತಿ ನೀಡುತ್ತಿದ್ದರೆ, ಮತ್ತೊಂದೆಡೆ ಖಾಸಗಿ ಬಸ್‌ಗಳ ಪ್ರಯಾಣದ ದರ ಗಣನೀಯವಾಗಿ ಏರಿಕೆಯಾಗಿದೆ. ಸಾಮಾನ್ಯ ದಿನಗಳಲ್ಲಿ 500 ರಿಂದ 700 ರೂಪಾಯಿ ಇದ್ದ ಕೆಲ ಮಾರ್ಗಗಳ ಪ್ರಯಾಣದ ದರ ಪ್ರಸ್ತುತ ಖಾಸಗಿ ಬಸ್‌ಗಳಲ್ಲಿ 2 ಸಾವಿರ ರೂಪಾಯಿ ಗಡಿ ದಾಟಿದೆ. ಡೀಸೆಲ್ ದರ, ನಿರ್ವಹಣೆ, ಬಿಡಿ ಭಾಗಗಳು ಹಾಗೂ ತೆರಿಗೆ ಹೆಚ್ಚಳದ ಹಿನ್ನೆಲೆಯಲ್ಲಿ ಈ ದರ ಏರಿಕೆ ಅನಿವಾರ್ಯ ಎಂದು ಖಾಸಗಿ ಬಸ್ ಮಾಲೀಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೂ, ಪ್ರಯಾಣಿಕರಿಂದ ಬೇಕಾಬಿಟ್ಟಿಯಾಗಿ ಅತಿಯಾದ ದರ ವಸೂಲಿ ಮಾಡದಂತೆ ಸಾರಿಗೆ ಇಲಾಖೆಯು ಖಾಸಗಿ ಬಸ್ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗದ ದಸರಾ: ಶರಣ ಸಂಸ್ಕೃತಿಯ ಜನೋತ್ಸವ:ಮಂಗಳೂರಿನ ದಸರಾ; ಶಾರದಾ ಮಹೋತ್ಸವದಿಂದ ಜನೋತ್ಸವದವರೆಗೆ:… ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ-ರಮೇಶ್ ಬಾಬುನವರಾತ್ರಿ ಪ್ರಯುಕ್ತ ಅಂಭಾ ಭವಾನಿ ದೇವಿಗೆ ವಿಶೇಷ ಅಲಂಕಾರಹಾಡುಹಗಲೆ ವೃದ್ದೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಕಳ್ಳಛಲವಾದಿ ಗುರುಪೀಠದಲ್ಲಿ ಪ್ರತಿ ತಿಂಗಳ ಮೂರನೆ ಶನಿವಾರದಂದು ಆರೋಗ್ಯ ತಪಾಸಣೆ ಶಿಬಿರ ಆಗ್ನೇಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲಕ್ಷ್ಮಿಕಾಂತ್ ಎಸ್.ಯಾದವ್ ಮತ ನೀಡಲು ಮನವಿಸಂವಿಧಾನದ ಮೌಲ್ಯ ಎತ್ತಿಹಿಡಿಯಲು ಸಿಜೆಐ ಸೂರ್ಯಕಾಂತ್ ಹಾಗೂ ಡಿಕೆಶಿ ಕರೆಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್' ಸಂಚಿಗೆ ರಕ್ತ ಕುದಿಯುತ್ತಿಲ್ಲವೇ?: ಹೆಚ್.ಡಿ. ಕುಮಾರಸ್ವಾಮಿ