Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಡಿ.25 ರಂದು ಘಾಟಿ ಸುಬ್ರಮಣ್ಯ ಬ್ರಹ್ಮ ರಥೋತ್ಸವ : ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಚಂದ್ರವಳ್ಳಿ ನ್ಯೂಸ್,  ದೊಡ್ಡಬಳ್ಳಾಪುರ:
ಇತಿಹಾಸ ಪ್ರಸಿದ್ಧ  ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 25 ರಂದು ಬ್ರಹ್ಮರಥೋತ್ಸವ ನಡೆಯಲಿದ್ದು ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಮಾಹಿತಿ ನೀಡಿದರು. 

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ  ಡಿಸೆಂಬರ್ 25 ರಂದು  ಮಧ್ಯಾಹ್ನ 12.00 ರಿಂದ 12.15 ಗಂಟೆಯ ಶುಭ ಮೂಹರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಕಳೆದ ವರ್ಷ 1.50 ಲಕ್ಷದವರೆಗೂ ಭಕ್ತಾದಿಗಳು ಭಾಗಿಯಾಗಿದ್ದರು. ಈ ಬಾರಿ ಬ್ರಹ್ಮರಥೋತ್ಸವವು ರಜೆ ದಿನ ಬಂದಿರುವುದರಿಂದ ಸುಮಾರು ಎರಡು ಲಕ್ಷ ಭಕ್ತಾದಿಗಳು ಬರುವ ಸಾಧ್ಯತೆ ಇದೆ. ಟ್ರಾಫಿಕ್ ಸಮಸ್ಯೆ, ಜನಸಂದಣಿ ನಿಯಂತ್ರಿಸಲು ಹಲವು ಕ್ರಮ ಕೈಗೊಳ್ಳಲಾಗಿದೆ ಎಂದರು. 

ಘಾಟಿ ಕ್ಷೇತ್ರಕ್ಕೆ ಆಗಮಿಸಲು ಪ್ರಮುಖವಾಗಿ ಎರಡು ರಸ್ತೆ ಸಂಪರ್ಕಗಳಿದ್ದು ಮಾಕಳಿ ಹಾಗೂ ಕಂಟನಕುಂಟೆ ರಸ್ತೆಗಳಲ್ಲಿ ಸ್ವಚ್ಚತೆ ಕಾರ್ಯ, ಫುಟ್ ಪಾತ್ ಒತ್ತುವರಿ ತೆರವು  ಮಾಡಲಾಗಿದೆ. ಇಲ್ಲಿ ಮೂಲಸೌಕರ್ಯ ವ್ಯವಸ್ಥೆ ಮಾಡಲಾಗಿದೆ. ದೇವಾಲಯ ಸುತ್ತಮುತ್ತಲಿನ ಫುಟ್ ಪಾತ್ ಮೇಲಿನ ಅಂಗಡಿಗಳನ್ನು ತೆರವುಮಾಡಲಾಗಿದ್ದು ಭಕ್ತರ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದಂತೆ ಕ್ರಮವಹಿಸಲಾಗಿದೆ ಎಂದರು. 

*ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ*
ರಥೋತ್ಸವಕ್ಕೆ ಬರುವ ಭಕ್ತಾದಿಗಳ ವಾಹನಗಳಿಗೆ ಕಂಟನಕುಂಟೆ ಮಾರ್ಗ ಹಾಗು ಮಾಕಳಿ ಮಾರ್ಗ ಬಳಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೇ ಭಕ್ತಾದಿಗಳು ತಮ್ಮ ವಾಹನಗಳನ್ನು ನಿಲ್ಲಿಸಬೇಕು. ಪಾರ್ಕಿಂಗ್ ಸ್ಥಳದಿಂದ ದೇವಾಲಯದ ಬಳಿಗೆ ತೆರಳಲು ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು ಭಕ್ತಾದಿಗಳು ಆ ಬಸ್ ಗಳ ಮೂಲಕವೇ ಬಂದು ದರ್ಶನ ಪಡೆದು ಮತ್ತೇ ಅದೇ ಬಸ್ ಗಳ ಮೂಲಕ ಮರಳಬಹುದು. ದೇವಾಲಯದ ಬಳಿ ವಾಹನ ಸಂಚಾರ ದಟ್ಟಣೆ, ಸಂಚಾರಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದ್ದು ಭಕ್ತಾದಿಗಳು ಸಹಕರಿಸಬೇಕು ಎಂದರು. 

2026ರ ಜನವರಿ 31 ರವರೆಗೆ ಶ್ರೀ ಕ್ಷೇತ್ರಕ್ಕೆ ಬರುವ ವಾಹನಗಳಿಗೆ ಸುಂಕ ವಿನಾಯಿತಿ ನೀಡಲಾಗಿದೆ. ಭಕ್ತರಿಗೆ ಸುಗಮ ದರ್ಶನ ವ್ಯವಸ್ಥೆಗಾಗಿ ಧರ್ಮ ದರ್ಶನ ಮತ್ತು 50 ರೂಪಾಯಿಯ ವಿಶೇಷ ದರ್ಶನ ವ್ಯವಸ್ಥೆ ಇರಲಿದೆ. ಡಿಸೆಂಬರ್ 28 ರವರೆಗೆ ಕ್ಷೇತ್ರದಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದ್ದು, ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತರಿಗೆ ಉತ್ತಮ ಅನುಭವ ನೀಡುವ ನಿಟ್ಟಿನಲ್ಲಿ ಅಗತ್ಯಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಡಿಸಿ ತಿಳಿಸಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತನಾಡಿ, ಪ್ರತಿ ವರ್ಷದಂತೆ ಬ್ರಹ್ಮರಥೋತ್ಸವದಲ್ಲಿ ಎರಡು ಲಕ್ಷದವರೆಗೂ ಸಾರ್ವಜನಿಕರು ಸೇರುವ ನಿರೀಕ್ಷೆ ಇದೆ. ಭಕ್ತರಿಗೆ ಪಾರ್ಕಿಂಗ್ ಸಮಸ್ಯೆ ಬಗೆ ಹರಿಸಲು ಕ್ರಮ ವಹಿಸಲಾಗಿದ್ದುಕಾರು ಸೇರಿದಂತೆ ಇತರೆ ವಾಹನಗಳಿಗೆ 14 ಪಾರ್ಕಿಂಗ್ ಸ್ಥಳ, ದ್ವಿಚಕ್ರ ವಾಹನಗಳಿಗೆ 4 ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಭದ್ರತೆಗಾಗಿ ಈ ವರ್ಷ 1000 ಮಂದಿ  ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ, ಅಗ್ನಿಶಾಮಕ ವಾಹನ ವ್ಯವಸ್ಥೆ ಮಾಡಲಾಗಿದೆ. ಜತೆಗೆ 100 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಅದರ ವೀಕ್ಷಣೆಗೆ ಕಂಟ್ರೋಲ್ ರೂಂ ಕೂಡ ಸ್ಥಾಪಿಸಲಾಗಿದೆ ಎಂದರು. 



ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ, ಬ್ರಹ್ಮರಥೋತ್ಸವದ ಹಿನ್ನಲೆ ಘಾಟಿ ಕ್ಷೇತ್ರದ ರಂಗ ಮಂದಿರದಲ್ಲಿ ಡಿಸೆಂಬರ್ 24, 25 ರಂದು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಒಟ್ಟು 70 ಕಲಾ ತಂಡಗಳು ನೋಂದಣಿ ಆಗಿದ್ದು ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈಗಲೂ ಅವಕಾಶವಿದ್ದು  ರಂಗ ಮಂದಿರ ಬಳಿ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಆಗಿ ನೋಂದಾಯಿಸಬಹುದಾಗಿದೆ ಎಂದರು. 

ಕಂಟನಕುಂಟೆ , ಹಾಡೋನಹಳ್ಳಿ ಗ್ರಾಪಂ ವ್ಯಾಪ್ತಿಯ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ರಸ್ತೆ ಬದಿಯ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ಫುಟ್ ಪಾತ್ ಸ್ವಚ್ಚತೆ, ಅಂಗಡಿಗಳ ತೆರವು ಮಾಡಲಾಗಿದೆ. ಪಾರ್ಕಿಂಗ್ ಸ್ಥಳಗಳಲ್ಲಿ ಹಾಗೂ ತುರ್ತು ಸೇವೆಗಳ ನಿಮಿತ್ತ 04 ಅಂಬುಲೆನ್ಸ್ ವ್ಯವಸ್ಥೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಥಮ ಚಿಕಿತ್ಸೆ, ಹೆಚ್ಚುವರಿ ಆರೋಗ್ಯ ಸಿಬ್ಬಂದಿ ನೇಮಿಸಲಾಗಿದೆ, ಪಾರ್ಕಿಂಗ್ ಸ್ಲಾಟ್ ಗಳು, ಸಾರ್ವಜನಿಕ ಸ್ಥಳಗಳಲ್ಲಿ ಕುಡಿಯುವ ನೀರು, ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವಾಲಯ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಅಪರ ಜಿಲ್ಲಾಧಿಕಾರಿ ಸೈಯೀದಾ ಆಯಿಷಾ, ಘಾಟಿ ಸುಬ್ರಮಣ್ಯ ದೇವಾಲಯದ ಕಾರ್ಯದರ್ಶಿ ದಿನೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ, ಡಿವೈಎಸ್ಪಿ ಪಾಂಡುರಂಗ, ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ