Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆಗೆ ಹೆಚ್ಚು ಪ್ರಾಶಸ್ತ್ಯ ನೀಡಿ : ಸಿಪಿಐ ಶ್ರೀಶೈಲ ಬ್ಯಾಕೋಡ 


ಮೂಡಲಗಿ :  ಮಣ್ಣಿನ ಗಣಪತಿ ಕೂಡಿಸುವುದರೊಂದಿಗೆ ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಾ ಶಾಂತಿ ಹಾಗೂ ಸೌಹಾರ್ದತೆಯಿಂದ ಹಬ್ಬ ಆಚರಿಸಿ ಎಂದು ಸಿಪಿಐ ಶ್ರೀಶೈಲ ಬ್ಯಾಕೋಡ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಜರುಗಿದ ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಗಣಪತಿ ಮಂಡಳಿಗಳು ತಾವು ಒಳಪಡುವ ಪಂಚಾಯತಿ, ಪೊಲೀಸ್ ಠಾಣೆ ಹಾಗೂ ಕೆಇಬಿಗಳಿಂದ ಕಟ್ಟುನಿಟ್ಟಾಗಿ ಅನುಮತಿಯನ್ನು ಪಡೆಯಬೇಕು, ಇದರಿಂದ ಆಚರಣೆ ಸಂದರ್ಭದಲ್ಲಿ ಏನಾದರೂ ಅಹಿತಕರ ಘಟನೆಗಳು ಜರುಗಿದಾಗ  ಮಂಡಳಿಯ ಜಗಹವನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳು ಸೂಕ್ತ ಸಹಾಯ ಮಾಡಲು ಅನುಕೂಲವಾಗುತ್ತದೆ. ಶಬ್ಧ ಹಾಗೂ ವಾಯು ಮಾಲಿನ್ಯಕ್ಕೆ ಕಾರಣಗಳಾದ ಡಿಜೆ ಮತ್ತು ಜನ ನಿಭಿಡ ಪ್ರದೇಶಗಳಲ್ಲಿ ಅತಿರೇಕದ ಪಟಾಕಿ ಸಿಡಿಸುವುದನ್ನು ನಿಬಂಧಿಸಲಾಗಿದೆ ಎಂದ ಅವರು ನಿಯಮ ಪಾಲಿಸದ ವ್ಯಕ್ತಿಗಳ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಹಸೀಲ್ದಾರ ಶ್ರೀಶೈಲ ಗುಡುಮೆ ಮಾತನಾಡಿ, ಭಾರತ ಹಬ್ಬಗಳ ದೇಶ. ಪ್ರತಿಯೊಂದು ಹಬ್ಬದ ಆಚರಣೆಗೂ ಹಿನ್ನಲೆ ಇರುತ್ತದೆ, ಅದನ್ನು ತಿಳಿದುಕೊಂಡು ಪರಿಸರಕ್ಕೆ ಪೂರಕವಾಗಿ ಶ್ರದ್ಧಾ ಹಾಗೂ ಭಕ್ತಿಯಿಂದ ಆಚರಣೆಯಾದರೆ ಹಬ್ಬಗಳಿಗೆ ಅರ್ಥಬರುತ್ತದೆ. ಮಣ್ಣಿನ ಗಣಪತಿಗೆ ಹೆಚ್ಚು ಪ್ರಾಶಸ್ತ್ಯ ಕೊಡುತ್ತ ಸಾರ್ವಜನಿಕರಿಗೆ ಕಿರಿಕಿರಿ ಯಾಗುವಂತ ಡಿಜೆಗಳನ್ನು ಹಚ್ಚುವ ಬದಲು, ಕರಡಿ ಮಜಲು, ಸಂಬಾಳದಂತಹ ದೇಸಿ ವಾದ್ಯ ಮೇಳಗಳೊಂದಿಗೆ, ಮದ್ಯಪಾನ ಮಾಡದೇ ಭಕ್ತಿ ಪೂರ್ವಕವಾಗಿ ಗಣಪತಿಯನ್ನು ಬರಮಾಡಿಕೊಂಡು, ವಿಸರ್ಜಿಸಿದರೆ ಆಚರಣೆಗೂ ಕಳೆ ಬರುತ್ತದೆ ಎಂದು ನೆರೆದ ಗಣಪತಿ ಮಂಡಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮೂಡಲಗಿ ಪಿಎಸ್‌ಐ ವೈ.ಎಸ್. ಬಿಸನಾಳ, ಕುಲಗೋಡ ಪಿಎಸ್‌ಐ ಆನಂದ ಬಿ, ಹೆಸ್ಕಾಂ ಅಧಿಕಾರಿ ಪಿ.ವಿ. ಚೌಹಾನ, ಸ್ಥಳೀಯ ಮುಖಂಡರು ಸೇರಿದಂತೆ ಅನೇಕ ಗಣಪತಿ ಮಂಡಳಿಗಳ ಪದಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ