LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೋಟೆನಾಡಿನಲ್ಲಿ ಬಿ.ಎಸ್.ಯಡಿಯೂರಪ್ಪರ ಅಭಿಮಾನೋತ್ಸವ ಮುನ್ನಾದಿನ ವೈಭವೋಪೇತ ಮೆರವಣಿಗೆ

ಚಿತ್ರದುರ್ಗ : ಐವತ್ತು ವರ್ಷಗಳ ಸುದೀರ್ಘ ರಾಜಕೀಯ ಪಣಯವನ್ನು ಕಂಡಿರುವ ರೈತ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಇಂದು ಅಭಿಮಾನೋತ್ಸವದ ಮುನ್ನಾ ದಿನ ಶುಕ್ರವಾರ ನಗರದಲ್ಲಿ ವೈಭವೋಪೇತ ಮೆರವಣಿಗೆ ನಡೆಯಿತು.

ದಕ್ಷಿಣ ಭಾರತದಲ್ಲಿಯೆ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಕಮಲವನ್ನು ಅರಳಿಸಿದ ಬಿ.ಎಸ್.ಯಡಿಯೂರಪ್ಪನವರು ಬಡವರ ಮನೆಯ ಹೆಣ್ಣು ಮಗುವಿಗೆ ಭಾಗ್ಯಲಕ್ಷಿ ಯೋಜನೆಯನ್ನು ಜಾರಿಗೆ ತಂದು ಮಹಿಳೆಯರ ಸಂಜೀವಿನಿ ಎನಿಸಿಕೊಂಡರು. ರೈತರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೈತ ನಾಯಕನ ಮೆರವಣಿಗೆಯುದ್ದಕ್ಕೂ ಅಲ್ಲಲ್ಲಿ ಪಟಾಕಿಗಳನ್ನು ಸಿಡಿಸಿ ಕುಣಿದು ಕುಪ್ಪಳಿಸಿದ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟುಂತಿತ್ತು.

ಸಂಜೆ ಆರು ಗಂಟೆಗೆ ತಂಪು ಹೊತ್ತಿನಲ್ಲಿ ಕನಕ ವೃತ್ತದಿಂದ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಆರಂಭಗೊಂಡ ಮೆರವಣಿಗೆ ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿ ಸರ್ಕಲ್, ಎಸ್.ಬಿ.ಎಂ.ವೃತ್ತ, ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಮದಕರಿನಾಯಕನ ಪ್ರತಿಮೆ ಬಳಿ ಮುಕ್ತಾಯಗೊಂಡಿತು.

ಡೊಳ್ಳು, ಉರುಮೆ, ತಮಟೆ, ನಂದಿಕೋಲು, ವೀರಗಾಸೆ, ಗೊರವರ ಕುಣಿತ, ಕಹಳೆ, ಸೋಮನ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಗೆ ಕಳೆ ಕಟ್ಟಿದಂತಿತ್ತು. ತೆರೆದ ವಾಹನದಲ್ಲಿ ವಿರಾಜಮಾನರಾಗಿದ್ದ ಬಿ.ಎಸ್.ಯಡಿಯೂರಪ್ಪನವರು ರಸ್ತೆಯ ಎರಡು ಬದಿಗಳಲ್ಲಿ ನಿಂತಿದ್ದ ಜನತೆಯತ್ತ ಕೈಬೀಸಿ ಅಭಿಮಾನೋತ್ಸವಕ್ಕೆ ಪ್ರತಿಯಾಗಿ ಕೃತಜ್ಞತೆ ಸಲ್ಲಿಸುತ್ತಿದ್ದರು.

ನಾನಾ ಬಗೆಯ ಸ್ಥಬ್ದ ಚಿತ್ರಗಳು ಮೆರವಣಿಗೆಯಲ್ಲಿ ಕಣ್ಮನ ಸೆಳೆಯುತ್ತಿದ್ದವು.

ಬಿಜೆಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿ.ವೈ.ರಾಘವೇಂದ್ರ, ಸಂಸದ ಗೋವಿಂದ ಎಂ.ಕಾರಜೋಳ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಸಚಿವರುಗಳಾದ ಶ್ರೀರಾಮುಲು, ಜನಾರ್ಧನರೆಡ್ಡಿ, ಬಿ.ಸಿ.ಪಾಟೀಲ್, ಬಿಜೆಪಿ. ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಲಿಂಗಮೂರ್ತಿ, ಜಿ.ಹೆಚ್.ಮೋಹನ್ಕುಮಾರ್ ಸೇರಿದಂತೆ ಬಿಜೆಪಿ.ಯ ಅನೇಕ ಮುಖಂಡರುಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

 

ಫೋಟೋ ವಿವರಣೆ : ರೈತ ನಾಯಕ ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವದ ಪ್ರಯುಕ್ತ ವೈಭವೋಪೇತವಾಗಿ ನಡೆದ ಮೆರವಣಿಗೆ.   ಫೋಟೋ-1.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026