LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ : ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.

ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ಮೊದಲ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದಾರೆ. ಅವರು ನಿರ್ಗಮಿತ ಆಯುಕ್ತ ರಾಜೀವ್ ಕುಮಾರ್ ಅವರ ಸ್ಥಾನವನ್ನು ತುಂಬಲಿದ್ದಾರೆ.

26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿರುತ್ತಾರೆ. ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ. ಜ್ಞಾನೇಶ್ ಕುಮಾರ್ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗಳು ಮತ್ತು 2026 ರಲ್ಲಿ ನಡೆಯಲಿರುವ ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳ್ಳಂಬೆಳಗ್ಗೆ ಕೃಷಿ ಇಲಾಖೆ ಅಧಿಕಾರಿ ಎಡಿ ಚಂದ್ರಕಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ.!ದೆಹಲಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ14-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!ವಚನ.: -ಉರಿಲಿಂಗದೇವ  .!'ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ' - ಪರಿಶೀಲಿಸಲು ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ'ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ'-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ'ಸಿಎಂ ಕರೆದ ಭೋಜನ ಮೀಟಿಂಗ್‌ಗೂ, ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ' -ಪರಮೇಶ್ವರ್‌ಗಾಜಾ ಯುದ್ಧ ಅಂತ್ಯ: ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್ಎಲ್‌ಒಸಿಯಲ್ಲಿ ಭಯೋತ್ಪಾದಕರ ಲಾಂಚ್ ಪ್ಯಾಡ್‌ಗಳು ಸಕ್ರಿಯ; ಬಿಎಸ್‌ಎಫ್ ಕಟ್ಟೆಚ್ಚರ