Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಳ್ಳರಿಂದ ವಶಪಡಿಸಿಕೊಂಡ ಚಿನ್ನಾಭರಣ

 

ಸುದ್ದಿಮೂಲ ವಾರ್ತೆ

ಮೈಸೂರು, ಜೂ.14: ಜಿಲ್ಲೆಯ ಹುಣಸೂರು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿ ಬಡಾವಣೆ ಮತ್ತು ಮಂಜುನಾಥ ಬಡಾವಣೆಗಳಲ್ಲಿ ರಾತ್ರಿ ಕಳವು ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 18 ಲಕ್ಷ ರೂ. ಮೌಲ್ಯದ 289 ಗ್ರಾಂ ಚಿನ್ನಾಭರಣ ಬೆಳ್ಳಿ ಪದಾರ್ಥಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಿಲ್ಲಾ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಮೇ ತಿಂಗಳಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿದ್ದವು. ಈ ಪ್ರಕರಣಗಳನ್ನು ಪತ್ತೆ ಹಚ್ಚಲು ಹೆಚ್ಚುವರಿ ಎಸ್ಪಿ , ಡಾ.ನಂದಿನಿ ಮಾರ್ಗದರ್ಶನದಲ್ಲಿ ಹುಣಸೂರು ಉಪವಿಭಾಗದ ಇನ್‌ಸ್ಟೆಕ್ಟರ್‌ ಎಸ್‌.ಎಂ ದೇವೇಂದ್ರ ಹಾಗೂ ಹುಣಸೂರು ಟೌನ್ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರನ್ನು ಒಳಗೊಂಡ ತಂಡವನ್ನು ರಚಿಸಲಾಗಿತ್ತು.

ಈ ತಂಡ, 3 ಜನ ಆರೋಪಿಗಳನ್ನು ವಶಕ್ಕೆ ಪಡೆದು ಹುಣಸೂರು ಪಟ್ಟಣ ಪೊಲೀಸ್‌ ಠಾಣೆಯ 15 ಪ್ರಕರಣ, ಪಿರಿಯಾಪಟ್ಟಣ ಪೊಲೀಸ್ ಠಾಣೆಯ 1 ಪ್ರಕರಣ ಹಾಗೂ ಕೆ.ಆರ್.ನಗರ ಪೊಲೀಸ್ ಠಾಣೆಯ 1 ಪ್ರಕರಣ, ಮೈಸೂರು ಜಿಲ್ಲೆಯಲ್ಲಿ ವರದಿಯಾಗಿದ್ದ ಒಟ್ಟು 7 ಪ್ರಕರಣಗಳಲ್ಲಿ ಭಾಗಿಯಾಗಿರುವುದನ್ನು ಪತ್ತೆ ಮಾಡಿದೆ.

ಆರೋಪಿಗಳಿಂದ 18 ಲಕ್ಷ ಮೌಲ್ಯದ 289 ಗ್ರಾಂ ಚಿನ್ನಾಭರಣ, 2.4 ಕೆ.ಜಿ ಬೆಳ್ಳಿ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ .ಆರೋಪಿಗಳು ಈ ಹಿಂದೆ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದಾರೆ ಎಂದು ತಿಳಿಸಿದರು.

ಮಾಲೀಕರ ಗಮನ ಸೆಳಡದು 1.30 ಲಕ್ಷ ರೂ. ಕಳವು

ಮಾಲೀಕರ ಗಮನ ಬೇರೆಡೆ ಸೆಳೆದು ಗಲ್ಲಾ ಪೆಟ್ಟಿಗೆಯಲ್ಲಿದ್ದ 1.30 ಲಕ್ಷ ನಗದು ದೋಚಿ ಪರಾರಿಯಾದ ಘಟನೆ ಮೈಸೂರಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಡೆದಿದೆ.

ಮೂವರು ಕಳ್ಳರಿಂದ ಕೃತ್ಯ ನಡೆದಿದೆ. ಕಮೀಷನ್ ಏಜೆಂಟ್ ಆಗಿರುವ ಅಯಾಜ್ ಎಂಬುವರಿಗೆ ಸೇರಿದ ಮಳಿಗೆ 72 ರಲ್ಲಿ ಘಟನೆ ನಡೆದಿದೆ. ಹೋಲ್ ಸೇಲ್ ದರದಲ್ಲಿ ಹಣ್ಣು ಖರೀದಿಸುವ ಸೋಗಿನಲ್ಲಿ ಬಂದ ಖದೀಮರು ಮಾಲೀಕರ ಗಮನವನ್ನು ಬೇರೆಡೆ ಸೆಳೆದು ಹಣ ಲಪಟಾಯಿಸಿದ್ದಾರೆ. ಮಂಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ