LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಂಗಾರ ಧಾಮ’ ಈಗ ಐತಿಹಾಸಿಕ ಪ್ರವಾಸಿ ತಾಣ

ಸೊರಬ: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ‘ಬಂಗಾರ ಧಾಮ’ವನ್ನು ರಾಜ್ಯ ಸರ್ಕಾರ ಐತಿಹಾಸಿಕ ಪ್ರವಾಸಿ ತಾಣವಾಗಿ ಗುರುತಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

‘ಬಂಗಾರ ಧಾಮ’ ವನ್ನು ಶ್ರೀ ಮಧು ಬಂಗಾರಪ್ಪ ಅವರ ನೇತೃತ್ವದ ಎಸ್. ಬಂಗಾರಪ್ಪ ಫೌಂಡೇಶನ್ ನಿರ್ವಹಿಸುತ್ತಿದೆ.

ಮಧು ಬಂಗಾರಪ್ಪ ಅವರು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವುದಲ್ಲದೇ ಬಂಗಾರ ಧಾಮವನ್ನು ಶ್ರೀ ಬಂಗಾರಪ್ಪ ನವರ ಚಿಂತನೆ, ಅಭಿರುಚಿ, ಜನಸಮೂಹದೊಂದಿಗೆ ಅವರಿಗಿದ್ದ ಬಾಂಧವ್ಯಕ್ಕೆ ತಕ್ಕಂತೆ ನಿರ್ಮಾಣವಾಗಿರುವುದು ವಿಶೇಷ.

ಗೃಹ ಸಚಿವರಾದ ಡಾ. ಜಿ. ಪರಮೇಶ್ವರ; ಕಾನೂನು, ಸಂಸತ್ತೀಯ ವ್ಯವಹಾರಗಳ ಸಚಿವರಾದ ಶ್ರೀ ಎಚ್. ಕೆ. ಪಾಟೀಲ; ವಿಧಾನ ಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ; ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್; ಸಣ್ಣ ನೀರಾವರಿ ಸಚಿವರಾದ ಶ್ರೀ ಎನ್.ಎಸ್. ಬೋಸರಾಜು; ಮಾಜಿ ಸಚಿವರಾದ ಶ್ರೀ ಅರವಿಂದ ಲಿಂಬಾವಳಿ ಸೇರಿದಂತೆ ಅನೇಕ ಶಾಸಕರು, ಸಚಿವರು ಹಾಗೂ ಹಿರಿಯ ನಾಯಕರು ಈ ಸ್ಥಳಕ್ಕೆ ಭೇಟಿ ನೀಡಿ ‘ಬಂಗಾರ ಧಾಮ’ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದಲ್ಲದೆ, ಈಗಾಗಲೇ ‘ಬಂಗಾರ ಧಾಮ’ ಅನೇಕ ಗಣ್ಯರು, ಸಾರ್ವಜನಿಕರು ಭೇಟಿ ನೀಡುತ್ತಿದ್ದಾರೆ.

‘ಬಂಗಾರ ಧಾಮ’ವು ಕರ್ನಾಟಕದ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಾರೇಕೊಪ್ಪ ಬಂಗಾರಪ್ಪ ಮತ್ತು ಶಕುಂತಲಮ್ಮ ಅವರ ಪುಣ್ಯಸ್ಥಳವಾಗಿ ಅಭಿಮಾನಿಗಳ ಮನದಾಳದಲ್ಲಿ ವಿಶೇಷ ಸ್ಥಾನ ಪಡೆದಿದೆ. ಸೊರಬದ ಮಧ್ಯಭಾಗದಲ್ಲಿರುವ ಈ ಧಾಮವು ದೇಶದಲ್ಲಿಯೇ ವಿಭಿನ್ನ ಶಕ್ತಿಧಾಮವಾಗಿ ಗುರುತಿಸಿಕೊಂಡಿದೆ.

ಸುಮಾರು ಒಂದು ಕಾಲು ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ಧಾಮವು 100x100 ಅಡಿ ವ್ಯಾಪ್ತಿಯ ವಿಶಿಷ್ಟ ವಿನ್ಯಾಸದ ಪುಣ್ಯಸ್ಥಳವಾಗಿದ್ದು, ಗ್ರಾನೈಟ್ ಮತ್ತು ಮಾರ್ಬಲ್ ಕೆತ್ತನೆಯ ಕಲಾಕೃತಿಗಳು ಇದರ ಸೌಂದರ್ಯವನ್ನು ಹೆಚ್ಚಿಸಿವೆ. ಧ್ಯಾನಮಂದಿರ, ಕುಡಿಯುವ ನೀರು, ಶೌಚಾಲಯ, ವಾಕಿಂಗ್ ಪಾಥ್, ಹೂವಿನ ತೋಟ, ಅಲಂಕಾರಿಕ ಗಿಡಗಳು ಸೇರಿದಂತೆ ಅಗತ್ಯ ಸೌಲಭ್ಯಗಳು ಇಲ್ಲಿ ಲಭ್ಯ.

ಇದಲ್ಲದೆ, 1,500 ಮಂದಿಗೆ ಆಸನ ವ್ಯವಸ್ಥೆಯೊಂದಿಗೆ ಆಧುನಿಕ ಬಯಲು ರಂಗಮಂದಿರ ನಿರ್ಮಾಣಗೊಂಡಿದ್ದು, ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳಿಗೆ ಅನುಕೂಲವಾಗಿದೆ. ಹೆಲಿಫ್ಯಾನ್ ಅಳವಡಿಕೆಯೊಂದಿಗೆ ವಾತಾವರಣ ಮತ್ತಷ್ಟು ಸುಂದರಗೊಂಡಿದೆ.

ಸಂಪಿಗೆ ಮರ, ಕಲ್ಪವೃಕ್ಷ, ಈಚಲು ಮರಗಳನ್ನು ಒಳಗೊಂಡ ಸಸ್ಯಸಂಪತ್ತಿ, 56 ಅಡಿ ಎತ್ತರದ ಕ್ಲಾಕ್ ಟವರ್, ವಿದ್ಯುದ್ಲಂಕಾರ ಹಾಗೂ ಆಕರ್ಷಕ ಸಂಗೀತ ಬಂಗಾರ ಧಾಮದ ವೈಶಿಷ್ಟ್ಯಗಳಾಗಿ ಕಂಗೊಳಿಸುತ್ತಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ