LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ ಚಿನ್ನ ವಶ.!

 

ಮುಂಬೈ: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ 12.47 ಕೆ.ಜಿ ಚಿನ್ನ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಕಸ್ಟಮ್ಸ್ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಪ್ರಿಲ್ 29 ರಿಂದ ಮೇ 2ರವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು.

ಕಾರ್ಯಾಚರಣೆ ವೇಳೆ ಹಲವು ಪ್ರಯಾಣಿಕರು ಚಿನ್ನವನ್ನು ಮೇಣದ ರೂಪದಲ್ಲಿ, ಬಟ್ಟೆಗಳಲ್ಲಿ, ನೀರಿನ ಬಾಟಲಿ ಮತ್ತು ಗುದನಾಳದಲ್ಲಿ ಬಚ್ಚಿಟ್ಟಿರುವುದು ಕಂಡುಬಂದಿದೆ. ಈ ಸಂಬಂಧ ಐವರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಮಾನ ನಿಲ್ದಾಣದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಯ ಶೋಧದ ವೇಳೆ, ನೀರಿನ ಬಾಟಲಿನಲ್ಲಿ ಸುಮಾರು 2.58 ಕೆ.ಜಿ ತೂಕದ ಚಿನ್ನವನ್ನು ಮೇಣದ ರೂಪದಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ. ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST