Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

GOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ ಯೋಜನೆಯಡಿ ವಿದ್ಯುತ್ ಸಂಪರ್ಕಗಳ (ಮೀಟರ್ ಸ್ಥಾವರಗಳ) ಹೆಚ್ಚುವರಿ ಮಾಹಿತಿ ಸಂಗ್ರಹಿಸಿ ‘ಸೇವಾಸಿಂಧು’ ತಂತ್ರಾಂಶದಲ್ಲಿ ದಾಖಲಿಸುವ (ಇಂಧೀಕರಿಸುವ) ಪ್ರಕ್ರಿಯೆಯ ಗಡುವನ್ನು ರಾಜ್ಯ ಸರ್ಕಾರ ಅಕ್ಟೋಬರ್ 31, 2026ರವರೆಗೆ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿದೆ.

ಅರ್ಹ ಮತ್ತು ಜೀವಂತ ಫಲಾನುಭವಿಗಳ ದೃಢೀಕರಣಕ್ಕೆ ಕ್ರಮ

ಗೃಹಜ್ಯೋತಿ ಯೋಜನೆಯ ಸೌಲಭ್ಯವು ಕೇವಲ ಜೀವಂತ ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಫಲಾನುಭವಿಗಳು ಮೃತಪಟ್ಟಿರುವ ಪ್ರಕರಣಗಳು, ಮನೆ ಬದಲಾವಣೆ, ಮನೆ ಖರೀದಿ ಅಥವಾ ಮಾರಾಟದ ಸಂದರ್ಭಗಳಲ್ಲಿ ವಿವರಗಳು ಸಕಾಲದಲ್ಲಿ ಪರಿಷ್ಕರಣೆಯಾಗದಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಸೂಚನೆಯಂತೆ, ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಮ್ಸ್) ಸಿಬ್ಬಂದಿ ಹಾಗೂ ಮೀಟರ್ ರೀಡರ್‌ಗಳು ನೇರವಾಗಿ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಿಬ್ಬಂದಿ ಸಂಗ್ರಹಿಸುತ್ತಿರುವ ಪ್ರಮುಖ ವಿವರಗಳು

ಮನೆಗಳಿಗೆ ಭೇಟಿ ನೀಡುವ ಸಿಬ್ಬಂದಿಯು ಮಾಲೀಕರು ಅಥವಾ ಬಾಡಿಗೆದಾರರಿಂದ ಈ ಕೆಳಗಿನ ಪ್ರಮುಖ ದಾಖಲೆ ಹಾಗೂ ಮಾಹಿತಿಗಳನ್ನು ಸಂಗ್ರಹಿಸಿ ಸೇವಾಸಿಂಧು ತಂತ್ರಾಂಶಕ್ಕೆ ಅಪ್‌ಲೋಡ್ ಮಾಡುತ್ತಿದ್ದಾರೆ:

  • ಪಡಿತರ ಚೀಟಿ (ರೇಷನ್ ಕಾರ್ಡ್) ವಿವರಗಳು

  • ಕರ್ನಾಟಕ ರಾಜ್ಯದ ಮತದಾರರ ಗುರುತಿನ ಚೀಟಿ (EPIC ಸಂಖ್ಯೆ)

  • ಅರ್ಜಿದಾರರ ಇತ್ತೀಚಿನ ಭಾವಚಿತ್ರ

  • ಅರ್ಜಿದಾರರ ಜಾತಿ/ಪ್ರವರ್ಗ ಹಾಗೂ ವೃತ್ತಿಯ ವಿವರ

  • ಆದಾಯ ತೆರಿಗೆ ಪಾವತಿಯ ಸ್ಥಿತಿಗತಿ ವಿವರ

ಅವಧಿ ವಿಸ್ತರಣೆಗೆ ಕಾರಣವೇನು?

ಜುಲೈ 1, 2026 ರಿಂದಲೇ ಈ ಪ್ರಕ್ರಿಯೆಯನ್ನು ಆರಂಭಿಸಲಾಗಿದ್ದು, ಈ ಹಿಂದೆ ಎರಡು ಬಾರಿ ಕಾಲಾವಕಾಶ ನೀಡಲಾಗಿತ್ತು. ಆದರೆ, ಮನೆಗಳಿಗೆ ಬೀಗ ಹಾಕಿರುವುದು (Door Locked/Vacant), ತಾಂತ್ರಿಕ ಕಾರಣಗಳಿಂದ 'ಡೇಟಾ ನಾಟ್ ಫೌಂಡ್' ಸಮಸ್ಯೆ, ಮಾಹಿತಿ ನೀಡಲು ಕೆಲವರು ನಿರಾಕರಿಸಿದ ಪ್ರಕರಣಗಳು, ಖಾಲಿ ಇರುವ ಮನೆಗಳು, ಶಾಶ್ವತವಾಗಿ ವಿದ್ಯುತ್ ಕಡಿತಗೊಂಡಿರುವ ಸ್ಥಾವರಗಳು ಹಾಗೂ ಸೌರಶಕ್ತಿ ಮೇಲ್ಛಾವಣಿ ಹೊಂದಿರುವ ವಿಶೇಷ ಪ್ರಕರಣಗಳ ಸ್ಥಳ ಪರಿಶೀಲನೆ ಬಾಕಿ ಉಳಿದಿತ್ತು. ಹೀಗಾಗಿ ಪರಿಶೀಲನೆಯನ್ನು ಪೂರ್ಣಗೊಳಿಸಲು ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಸೆಸ್ಕ್ ಹಾಗೂ ಹುಕ್ಕೇರಿ ಸೊಸೈಟಿಗಳು ಹೆಚ್ಚುವರಿ ಸಮಯ ಕೋರಿದ್ದವು.

ಅಕ್ಟೋಬರ್ 31ರೊಳಗೆ ಪ್ರಕ್ರಿಯೆ ಪೂರ್ಣಕ್ಕೆ ಆದೇಶ

ವಿದ್ಯುತ್ ಸರಬರಾಜು ಕಂಪನಿಗಳ ಮನವಿಯನ್ನು ಪುರಸ್ಕರಿಸಿರುವ ಇಂಧನ ಇಲಾಖೆಯು, ಈಗಾಗಲೇ ನೀಡಲಾಗಿದ್ದ ಮೂರು ತಿಂಗಳ ಅವಧಿಯ ಜತೆಗೆ ಮತ್ತೊಂದು ತಿಂಗಳು (ದಿನಾಂಕ 31.10.2026 ರವರೆಗೆ) ವಿಸ್ತರಿಸಿ ಅಂತಿಮ ಆದೇಶ ನೀಡಿದೆ. ಈ ನಿಗದಿತ ಅವಧಿಯೊಳಗೆ ಎಲ್ಲಾ ಬಾಕಿ ಉಳಿದಿರುವ ಸ್ಥಾವರಗಳ ವಿವರಗಳನ್ನು ಸೇವಾಸಿಂಧು ತಂತ್ರಾಂಶದಲ್ಲಿ ನಮೂದಿಸುವಂತೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು..

news_1791644976_2_570.webp

 

news_1791644976_1_642.webp

 

news_1791644976_0_397.webp

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!