LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಡಿಕೆ ಬೆಳೆಗಾರರಿಗೆ ಖುಷಿ ಸುದ್ದಿ .!

ಬೆಂಗಳೂರು: ಅಡಕೆ ಹಾನಿಕಾರಕವಲ್ಲ ಎಂದು ಎಂಎಸ್ ರಾಮಯ್ಯ ವಿವಿ ಸಂಶೋಧನೆ ನಡೆಸಿ ವರದಿ ನೀಡಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿಧಾನ ಪರಿಷತ್ ಗೆ ಮಾಹಿತಿ ನೀಡಿದ್ದಾರೆ.

ಬಿಜೆಪಿಯ ಪ್ರತಾಪ ಸಿಂಹ ನಾಯಕ್ ಅವರ ಪ್ರಶ್ನೆಗೆ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಪರವಾಗಿ ಉತ್ತರಿಸಿದ ಕೃಷಿ ಸಚಿವರು, ಪಾನ್ ಅಥವಾ ಪಾನ್ ಮಸಾಲದಂತಹ ಪದಾರ್ಥಗಳಲ್ಲಿ ಅಡಕೆಯನ್ನು ಒಂದು ಅಂಶವಾಗಿ ಅಲ್ಪ ಪ್ರಮಾಣದಲ್ಲಿ ಸೇವಿಸಿದರೆ ಮತ್ತು ತಂಬಾಕು ಸೇರಿಸದೆ ಇದ್ದರೆ ಹಾನಿಕಾರಕವಲ್ಲ ಎಂದು ಎಂಎಸ್ ರಾಮಯ್ಯ ವಿವಿ ಸಂಶೋಧನಾ ವರದಿ ಹೇಳಿದೆ. ಅಡಕೆ ತಟ್ಟೆಗಳನ್ನು ಬಳಸಿದಲ್ಲಿ ಆರೋಗ್ಯಕ್ಕೆ ಅತ್ಯಂತ ಕಡಿಮೆ ಅಪಾಯವಿದೆ ಎಂದು ಕೇರಳ ಸಂಸ್ಥೆಯಿಂದ ಮಧ್ಯಂತರ ವರದಿ ಸಲ್ಲಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಡಕೆ ಕುರಿತ ಸಂಶೋಧನೆ ನಡೆಯುತ್ತಿದ್ದು, ಅಂತಿಮ ವರದಿ ಬಂದ ನಂತರ ಅಡಕೆ ಕ್ಯಾನ್ಸರ್ ಕಾರಕವಲ್ಲ ಎನ್ನುವುದು ಸರ್ಕಾರದಿಂದಲೇ ಅಗತ್ಯ ಪ್ರಚಾರ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅಡಕೆಗೆ ಅಂಟಿದ ಕಳಂಕ ತೊಡೆದು ಹಾಕಲು ಅಡಕೆ ಬಳಕೆಯಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಕುರಿತ ಸಂಶೋಧನೆ ಜವಾಬ್ದಾರಿಯನ್ನು ಬೆಂಗಳೂರಿನ ಎಂಎಸ್ ರಾಮಯ್ಯ ವಿಶ್ವವಿದ್ಯಾಲಯಕ್ಕೆ ವಹಿಸಿದ್ದು, 31 ಲಕ್ಷ ವೆಚ್ಚದಲ್ಲಿ ಸಂಶೋಧನೆ ನಡೆಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026