ಅತಿಥಿ ಉಪನ್ಯಾಸಕರುಗಳಿಗೆ ಗುಡ್ ನ್ಯೂಸ್.!
ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಏಪ್ರಿಲ್ -2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ.
ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಏಪ್ರಿಲ್ -2025 ರ ಮಾಹೆವರೆಗಿನ ಗೌರವಧನ ಪಾವತಿಗಾಗಿ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ 12 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳು ಏಪ್ರಿಲ್ -2025 ರ ಮಾಹೆಯ ಗೌರವಧನ ಪಾವತಿಸಲು ಕೊರತೆ ಆಗಿರುವ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಸಲ್ಲಿಸಿರುತ್ತಾರೆ. ಅದರಂತೆ ಅನುದಾನ ಬಿಡುಗಡೆ ಮಾಡಲು ಈ ಆದೇಶ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.