LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪೊಲೀಸರಿಗೆ ಖುಷಿ ಸುದ್ದಿ. ಬರ್ತಡೇ, ಅನಿವರ್ಸರಿಗೆ ಸಾಂದರ್ಭಿಕ ರಜೆ

ಬೆಂಗಳೂರು : ಯಾವುದೇಹಬ್ಬ-ಹರಿದಿನಗಳಿದ್ದರೂ ರಜೆ ಹಾಕದೇ  ಸಮಾಜದಲ್ಲಿ ಜನರಿಗಾಗಿ  ದುಡಿಯುವ  ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ(Karnataka Police Department) ಸಿಹಿಸುದ್ದಿ(Sweet News) ನೀಡಿದೆ.  ಅವರ ಜನ್ಮದಿನ(Birthday) ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ(Wedding Anniversary) ರಜೆ ಘೋಷಿಸಿದೆ.

ಕ’ರ್ನಾಟಕ’ ಪೊಲೀಸ್(Karnataka Police) ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ(Director General of Police) ಡಾ. ಎಂ.ಎ. ಸಲೀಂ ಸುತ್ತೋಲೆ ಹೊರಡಿಸಿದ್ದಾರೆ.

ಅದರಂತೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ(Karnataka Police Department) ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ – ಕಳೆಯಲು ಅನುಕೂಲವಾಗುವಂತೆ ಆ ದಿನ ಸಾಂದರ್ಬಿಕ ರಜೆ  ನೀಡಿ ಎಂದು ತಿಳಿಸಲಾಗಿದೆ.  ಇದರಿಂದ ಒತ್ತಡದ ಕೆಲಸ ಹಾಗೂ ವ್ಯಯಕ್ತಿಕ ಜೀವನ ಸಮತೋಲನಗೆ ರಜೆ ಸಹಾಯಕವಾಗಲಿದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ತಿಳಿಸಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ(Karnataka Police Department) ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ (DG & IGP) ಅಧಿಕೃತ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಡಿಜಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ(Holiday Order) ಹೊರಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026