ಹೊಸಪೇಟೆ: ವಿಜಯನಗರ ಜಿಲ್ಲೆಯ ಪಡಿತರ ಚೀಟಿದಾರರಿಗೆ ಪಡಿತರ ಚೀಟಿಯಲ್ಲಿನ ತಿದ್ದುಪಡಿ ಸೇವೆಗಳ ಅವಧಿಯನ್ನು ಮೇ 8 ರಿಂದ 2027ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.
ಸಾರ್ವಜನಿಕರು ಸಮೀಪದ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳ ಮೂಲಕ ಈ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಪಡಿತರ ಚೀಟಿ ತಿದ್ದುಪಡಿ ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕುವುದು, ವಿಳಾಸ ಅಥವಾ ನ್ಯಾಯಬೆಲೆ ಅಂಗಡಿ ಬದಲಾವಣೆ, ಇ-ಕೆವೈಸಿ ಪ್ರಕ್ರಿಯೆಗಳಿಗೆ 25 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಧ್ಯವರ್ತಿ ಅಥವಾ ಮೂರನೇ ವ್ಯಕ್ತಿಗಳ ಸಂಪರ್ಕಿಸಿ ಆಮಿಷಕ್ಕೆ ಒಳಗಾಗಬಾರದು. ಸರ್ಕಾರ ನಿಗದಿಪಡಿಸಿದ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣವನ್ನು ನೀಡಬಾರದು. ಅರ್ಜಿ ವಿಲೇವಾರಿ ಮತ್ತು ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಆಯಾ ತಾಲೂಕು ಕಚೇರಿಯ ಆಹಾರ ಶಾಖೆಯನ್ನು ಸಂಪರ್ಕಿಸಬಹುದು ಎಂದು ಆಹಾರ ಇಲಾಖೆ ಉಪ ನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.