Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶಿಕ್ಷಕರಿಗೆ ಸಿಹಿ ಸುದ್ದಿ

 

ಬೆಂಗಳೂರು :
ಸರ್ಕಾರಿ ನೌಕರರಿಗೆ ಜಾರಿಯಲ್ಲಿರುವ ಜ್ಯೋತಿ ಸಂಜೀವಿನಿ ಆರೋಗ್ಯ ವಿಮಾ ಯೋಜನೆಯನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸುವ ಬಗ್ಗೆ ಸಾಧಕ, ಬಾಧಕಗಳನ್ನು ಚರ್ಚಿಸಲು ಮುಂದಿನ ವಾರ ಅನುದಾನಿತ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆ ಕರೆಯುವುದಾಗಿ ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಶನಿವಾರ ನಗರದ ಶಿಕ್ಷಕರ ಸದನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು ಈ ಭರವಸೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ರಾಜಗೋಪಾಲ್‌ ಅವರು, ಜ್ಯೋತಿ ಸಂಜೀವಿನಿ, ಹಳೆ ಪಿಂಚಣಿ ಯೋಜನೆ, ಕಾಲ್ಪನಿಕ ವೇತನ ಜಾರಿ, ಶಾಲಾ ನೋಂದಣಿ ನವೀಕರಣಕ್ಕೆ ಇರುವ ಮಾನದಂಡಗಳನ್ನು ಸರಳೀಕರಿಸುವುದು ಸೇರಿದಂತೆ ಅನುದಾನಿತ ಶಿಕ್ಷಕರ 13 ಬೇಡಿಕೆಗಳನ್ನು ಈಡೇರಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ದಿನೇಶ್‌ ಗುಂಡೂರಾವ್‌ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

 

ಈ ಬೇಡಿಕೆಗಳ ಕುರಿತು ತಮ್ಮ ಭಾಷಣದಲ್ಲಿ ಪ್ರತಿಕ್ರಿಯೆ ನೀಡಿದ ದಿನೇಶ್‌ ಗುಂಡೂರಾವ್‌, ಜ್ಯೋತಿ ಸಂಜೀವಿನಿ ಇಲಾಖೆಯ ಮಟ್ಟದ ಯೋಜನೆಯಲ್ಲ. ಸರ್ಕಾರ ಇಡೀ ಸರ್ಕಾರಿ ನೌಕರರಿಗೆ ನರರೋಗ, ಕ್ಯಾನ್ಸರ್‌ ಸೇರಿದಂತೆ ವಿವಿಧ ಗಂಭೀರ ಕಾಯಿಲೆಗಳಿಗೆ ಆರೋಗ್ಯ ಸುರಕ್ಷಾ ಟ್ರಸ್ಟ್‌ಅಡಿ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಕಲ್ಪಿಸುವ ಯೋಜನೆ. ಇದನ್ನು ಅನುದಾನಿತ ಶಿಕ್ಷಕರಿಗೂ ವಿಸ್ತರಿಸುವ ನಿರ್ಧಾರ ಸರ್ಕಾರದ ಮಟ್ಟದಲ್ಲೇ ಆಗಬೇಕು. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಬೇಕಾಗುತ್ತದೆ ಎಂದರು.

ಅದಕ್ಕೂ ಮುನ್ನ ರಾಜ್ಯದಲ್ಲಿ ಎಷ್ಟುಜನ ಅನುದಾನಿತ ಶಿಕ್ಷಕರಿದ್ದಾರೆ? ಅವರೆಲ್ಲಾ ಸೇರಿ ಎಷ್ಟುಪ್ರೀಮಿಯಂ ಕಟ್ಟಬಹುದು? ಸರ್ಕಾರದಿಂದ ಎಷ್ಟುಹಣ ಒದಗಿಸಬೇಕಾಗಬಹುದು ಎಂಬ ಸಾಧಕ, ಬಾಧಕಗಳ ಬಗ್ಗೆ ಅಂದಾಜು ಮಾಹಿತಿ ಸಿದ್ಧಪಡಿಸಿಕೊಂಡು ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾಗುತ್ತದೆ. ಮುಂದಿನ ವಾರ ಸಂಘದ ಪದಾಧಿಕಾರಿಗಳ ಸಭೆ ಕರೆದು ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಸಂಘದಿಂದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಹಲವು ಶಿಕ್ಷಕರನ್ನು ಸನ್ಮಾನಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ