ಮಹಿಳಾ ಉದ್ಯಮಿದಾರರಿಗಾಗಿ ಗುಡ್ ನ್ಯೂಸ್ .!
ಬೆಂ.ಗ್ರಾ.ಜಿಲ್ಲೆ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ಉದ್ಯಮಿದಾರರು ನೋಂದಣಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಹೊಸದಾಗಿ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅಪ್ಲಿಕೇಷನ್ ಅನ್ನು ಲಾಂಚ್ ಮಾಡಲಾಗಿದೆ.
ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅಭಿವೃದ್ಧಿಗೊಳಿಸಲು ಹಾಗೂ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಮಹಿಳಾ ಉದ್ಯಮಿದಾರರನ್ನಾಗಿ ಮಾಡಲು ಹಾಗೂ ಮಹಿಳೆಯರು ಉತ್ಪಾದಿಸುವ ವಸ್ತುಗಳಿಗೆ ಉಚಿತವಾಗಿ ಮಾರುಕಟ್ಟೆ ವ್ಯವಸ್ಥೆಯನ್ನು ನಿಗಮದಿಂದ ಕಲ್ಪಿಸಲಾಗುತ್ತಿದೆ.
ಪ್ರಸಕ್ತ ಸಾಲಿಗೆ ಮಹಿಳಾ ಉದ್ದಿಮೆದಾರರನ್ನು ನೋಂದಾಯಿಸಲು ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅಪ್ಲಿಕೇಷನ್ ರೂಪಿಸಿದ್ದು, ಅರ್ಹರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ವಿವಿಧ ನಿಗಮದಿಂದ ಹಾಗೂ ಸರ್ಕಾರದ ವಿವಿಧ ನಿಗಮ ಮಂಡಳಿ ಮತ್ತು ಇಲಾಖೆಗಳ ಯೋಜನೆಗಳಡಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ದಿಮೆದಾರರು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿ ನೀಡಿ ನೋಂದಣಿ ಮಾಡಿಕೊಳ್ಳಲು ನಿಗಮದ ಅಭಿವೃದ್ಧಿ ನಿರೀಕ್ಷಕರು, ದೂ ಸಂ:9663683150 ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂ:206, 2ನೇ ಮಹಡಿ ಜಿಲ್ಲಾಡಳಿತ ಭವನ. ಬೀರಸಂದ್ರ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಸಾಂದರ್ಭಿಕ ಚಿತ್ರ)
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.