ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಬೈಕ್ ಗೆ ಗೂಡ್ಸ್ ಆಟೋ ಡಿಕ್ಕಿಯಾಗಿ ತಂದೆ, ತಾಯಿ, ಮಗು ಸಾವನ್ನಪ್ಪಿದ್ದಾರೆ. ರಾಂಗ್ ಸೈಡ್ ನಿಂದ ಬಂದ ಆಟೋ ಬೈಕ್ ಗೆ ಗುದ್ದಿದೆ. ಅಪಘಾತದ ಬಳಿಕ ಆಟೋ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಆರು ತಿಂಗಳ ಮಗು, ತಂದೆ, ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.