LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರಕಾರಿ ನೌಕರರು ಗಮನಿಸ ಬೇಕಾದ ಸುದ್ದಿ.!

 

 

ಬೆಂಗಳೂರು: ನೀವು ಇನ್ನೂ ಕಂಪ್ಯೂಟರ್ ಕಲಿತಿಲ್ಲವೆ.! ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು 2023ರ ಡಿಸೆಂಬರ್ 31 ರವೆರೆಗೆ ಸಮಯಾವಕಾಶವನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಅಧಿಕಾರಿಗಳು / ಸಿಬ್ಬಂದಿ ವರ್ಗದವರು ಡಿಸೆಂಬರ್ 31 ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ಈ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ. ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿರುತ್ತದೆ.

ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಬೇಕಾಗಿರುವ ಅಧಿಕಾರಿ/ ನೌಕರರು ಜಾಲತಾಣ https://clt.karnataka.gov.in ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪದ್ಮಶ್ರೀ ಹಿಂದಿರುಗಿಸಿದ ಕುಸ್ತಿಪಟು ಬಜರಂಗ್ ಪುನಿಯಾದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನ