LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 18 ರಿಂದ ಸರ್ಕಾರ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ : ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ

ಶಿವಮೊಗ್ಗ, ಮೇ.13  : ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮೇ 18ರಿಂದ 20ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ನೌಕರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತಿಳಿಸಿದರು ಒಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2017ರಲ್ಲಿ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ನಡೆದಿತ್ತು ಇದೀಗ ಎಂಟು ವರ್ಷಗಳ ನಂತರ ಮತ್ತೊಮ್ಮೆ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ 18ರಂದು ಸಂಜೆ 5:00 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಲಿದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರೀಡಾ ಜ್ಯೋತಿ ಸ್ವೀಕರಿಸಲಿದ್ದಾರೆ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದು ಜಿಲ್ಲೆಯ ಎಲ್ಲ ಜನ ಪ್ರತಿನಿಧಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು .

ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಾಳುಗಳಿಗೆ ಊಟ ವಸತಿ ಹಾಗೂ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಅವರು ವೈಯುಕ್ತ 97 ಸ್ಪರ್ಧೆಗಳು ನಡೆದರೆ 16 ಗುಂಪು ಸ್ಪರ್ಧೆಗಳು ನಡೆಯಲಿವೆ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವೈಯಕ್ತಿಕ 15 ಗುಂಪು 16 ಸ್ಪರ್ಧೆಗಳು ನಡೆಯಲಿದ್ದು ಮೇ 18ರಂದು ನಗರದ ಎನ್ಇಎಸ್ ಮೈದಾನದಲ್ಲಿ ನೋಂದಣಿ ಕಾರ್ಯಕ್ರಮ ನಡೆಯಲಿದೆ ಪಾಲ್ಗೊಳ್ಳುವ ಎಲ್ಲ ಕ್ರೀಡಾಪಟುಗಳಿಗೆ ಟ್ರ್ಯಾಕ್ ಸೂಟ್ ಅನ್ನ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು ಮೂರು ದಿನಗಳ ಕಾಲ ಪ್ರತಿದಿನ ಸಂಜೆ 7:00ಗೆ ನಮ್ಮ ನೌಕರರ ಸಮೂಹಕ್ಕೆ ರಾಜೇಶ್ ಕೃಷ್ಣನ್ ಅವರಿಂದ ಗಾನಸುದೆ ಸಂಗೀತ ಕಾರ್ಯಕ್ರಮದ ರಸ ಸಂಜೆ ಕಾರ್ಯಕ್ರಮವನ್ನ ನೀಡಲಾಗುತ್ತಿದೆ ಇದರಲ್ಲಿ ಸರಿಗಮಪ ಸ್ಪರ್ಧೆಯ ಸ್ಪರ್ಧಾಳುಗಳು ಕೂಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮೇ 20ರಂದು ಸಂಜೆ ಮೂರು ಗಂಟೆಗೆ ಕುವೆಂಪು ರಂಗ ಮಂದಿರದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ವಿಜೇತರಾದ ಕ್ರೀಡಾಪಟುಗಳಿಗೆ ಟ್ರೋಫಿ ಹಾಗೂ ನೆನಪಿನ ಕಾಣಿಕೆಯನ್ನು ನೀಡಲಾಗುವುದು ನೌಕರರಿಗೆ ಓಡಿ ಸೌಲಭ್ಯವನ್ನು ಕಲ್ಪಿಸಲಾಗಿದೆ ಕ್ರೀಡಾಕೂಟ ಅತ್ಯಂತ ಅಚ್ಚುಕಟ್ಟಾಗಿ ನಡೆಯಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನ ಮಾಡಲಾಗಿದೆ ಎಂದು ತಿಳಿಸಿದರು ಸುದ್ದಿಗೋಷ್ಠಿಯಲ್ಲಿ ನೌಕರ ಸಂಘದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ ಪ್ರಧಾನ ಕಾರ್ಯದರ್ಶಿ ಪಾಪಣ್ಣ ಶಿಕ್ಷಕರ ಸಂಘದ ಸಿದ್ಬಸಪ್ಪ ಮಾರುತಿ ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST