LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 9,871 ಹುದ್ದೆಗಳಿಗೆ ಸರಕಾರ ಗ್ರೀನ್ ಸಿಗ್ನಲ್.! ಡಿಟೈಲ್

 

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಬರೋಬ್ಬರಿ 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಈ ಕೆಳಕಂಡ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ.

ಉಳಿಕೆ ಮೂಲ ವೃಂದದ ಹುದ್ದೆಗಳ ವಿವರ

ಗ್ರೂಪ್-ಬಿ

  1. ಕ್ಲಿನಿಕಲ್ ಇನ್ ಸ್ಟ್ರಕ್ಟರ್ – 01

  2. ಸಹಾಯಕ ಕೀಟಶಾಸ್ತ್ರಜ್ಞರು – 07

  3. ಮೈಕ್ರೋಬಯಾಲಜಿಸ್ಟ್ – 12

  4. ಕ್ಲಿನಿಕಲ್ ಸೈಕಾಲಜಿಸ್ಟ್ – 06

  5. ಮನೋ ಸಾಮಾಜಿಕ ತಜ್ಞರು ( ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ) – 07

  6. ಕಿರಿಯ ರಾಸಾಯನ ಶಾಸ್ತ್ರಜ್ಞರು – 15


ಗ್ರೂಪ್-ಸಿ

  1. ಫಾರ್ಮಸಿಸ್ಟ್ ಅಧಿಕಾರಿ – 640

  2. ಶುಶ್ರೂಷಾಧಿಕಾರಿ – 1694

  3. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ( ಕಿ.ಆ.ಸ – ಮಹಿಳಾ) – 3317

  4. ಆರೋಗ್ಯ ನಿರೀಕ್ಷಣಾಧಿಕಾರಿ ( ಕಿ.ಆ.ಸ) – 2628

  5. ಕಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ – 356

  6. ಹಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ -34

  7. ಕಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ – 59

  8. ಹಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ -10

  9. ನೇತ್ರಾಧಿಕಾರಿ – 125

  10. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು – 83

  11. ಒಟ್ಟು ಹುದ್ದೆಗಳು 8994.


ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳ ವಿವರ

ಗ್ರೂಪ್-ಬಿ

  • ಸಹಾಯಕ ಕೀಟಶಾಸ್ತ್ರಜ್ಞರು – 02

  • ಮೈಕ್ರೋಬಯಾಲಜಿಸ್ಟ್ – 0

  • ಕ್ಲಿನಿಕಲ್ ಸೈಕಾಲಜಿಸ್ಟ್ – 02

  • ಮನೋ ಸಾಮಾಜಿಕ ತಜ್ಞರು ( ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್ ) – 0

  • ಕಿರಿಯ ರಾಸಾಯನ ಶಾಸ್ತ್ರಜ್ಞರು – 03


ಗ್ರೂಪ್-ಸಿ

  • ಫಾರ್ಮಸಿ ಅಧಿಕಾರಿ – 65

  • ಶುಶ್ರೂಷಾಧಿಕಾರಿ – 351

  • ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ( ಕಿ.ಆ.ಸ – ಮಹಿಳೆ) – 133

  • ಆರೋಗ್ಯ ನಿರೀಕ್ಷಣಾಧಿಕಾರಿ (ಕಿ.ಆ.ಸ) – 221

  • ಕಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ – 57

  • ಹಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ – 02

  • ಕಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ – 30

  • ನೇತ್ರಾಧಿಕಾರಿ – 05

  • ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ -06

  • ಒಟ್ಟು ಹುದ್ದೆ 877.


ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿಯಿರುವ 1205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ANMS) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ (HIOS) ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ನೇರ ನೇಮಕಾತಿ ಮುಖಾಂತ ಭರ್ತಿ ಮಾಡಿಕೊಳ್ಳಲು ಸರ್ಕಾರವು ಅನುಮತಿ ನೀಡಿ ಆದೇಶಿಸಿದ್ದಾರೆ.

ಮುಂದುವರೆದು, ಆಯುಕ್ತರು, ಆಕುಕ ಸೇವೆಗಳು ರವರು ನೇಮಕಾತಿ ಪ್ರಕ್ರಿಯೆಯನ್ನು ನಿಗಧಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳತಕ್ಕದ್ದು ಮತ್ತು ಕೆಳಕಂಡಂತ ವಿಧಿಸಿರುವ ಷರತ್ತುಗಳ ಅನುಪಾಲನಾ ವರದಿಯನ್ನು ಸಲ್ಲಿಸತಕ್ಕದ್ದು ಎಂದು ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟ್ರಂಪ್ ಸುಂಕ ಹೆಚ್ಚಳದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಕರೆ ಮಾಡಿದ ಬ್ರೆಜಿಲ್ ಅಧ್ಯಕ್ಷಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು'ಬ್ಯಾಕ್ ಟು ಊರು ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ' - ಸಂಸದ ಕ್ಯಾ. ಚೌಟದೇಶದ ಅತ್ಯಂತ ಕಿರಿಯ ಐಎಎಸ್ ಅಧಿಕಾರಿ ಆಸ್ತಾ ಸಿಂಗ್ ಯಶಸ್ಸಿನ ಕಥನಬಾಲಿವುಡ್ ನಟಿ ಹುಮಾ ಖುರೇಷಿ ಅವರ ಸೋದರಸಂಬಂಧಿ ಹತ್ಯೆ.!ಕರ್ನಾಟಕ PGCET ಪರೀಕ್ಷೆ ಫಲಿತಾಂಶ ಪ್ರಕಟ.!ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ.!ಉಪ್ಪಿನಿಂದ ಅದೃಷ್ಟ, ಆರೋಗ್ಯ, ಐಶ್ವರ್ಯ ಮತ್ತು ಲಕ್ಷ್ಮಿ ಕೃಪಾಕಟಾಕ್ಷ ! ಹಿಂದೂ ಧರ್ಮದಲ್ಲಿ ಉಪ್ಪಿಗಿದೆ ವಿಶೇಷ ಸ್ಥಾನಎಸ್ಸಿಪಿ. ಟಿಎಸ್ಪಿ. ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ವಿರೋಧಿಸಿ ಪ್ರತಿಭಟನೆ.!08-08-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ- .!