LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿ.ಪಿ.ಎಲ್ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ

ಬೆಳಗಾವಿ : ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್‌ದಾರರ ಆದಾಯ ಮಿತಿಯನ್ನು 1 ಲಕ್ಷ 20 ಸಾವಿರ ರೂಪಾಯಿಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂಪಾಯಿ ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ 1 ಲಕ್ಷ 80 ಸಾವಿರ ರೂಪಾಯಿಗೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

ತಾತ್ಕಾಲಿಕವಾಗಿ ಯಾವುದೇ ಬಿ.ಪಿ.ಎಲ್.ಕಾರ್ಡುಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿ.ಪಿ.ಎಲ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026