LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರ್ಕಾರಿ ಬಸ್‌ ಚಕ್ರದಡಿ ನಾಡ ಬಾಂಬ್‌ ಸ್ಫೋಟ: ತಪ್ಪಿದ ಘೋರ ದುರಂತ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ಸಿನ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟಗೊಂಡ ಘಟನೆ ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದಲ್ಲಿ ನಡೆದಿದ್ದು, ರಾಜ್ಯವನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಅಷ್ಟಕ್ಕೂ ಬಸ್‌ನಡಿ ಬಾಂಬ್‌ ಇಟ್ಟವರು ಯಾರು? ಇದರ ಹಿಂದಿನ ಉದ್ದೇಶವೇನು ಎಂಬ ಚರ್ಚೆ ಆರಂಭಗೊಂಡಿದೆ.

ಬಸ್ ಮುಡಬ ಸಿದ್ದಾಪುರದಿಂದ ಶಿಕಾರಿಪುರಕ್ಕೆ ತೆರಳುತ್ತಿತ್ತು. ಈ ವೇಳೆ ಬಸ್ ಹಿರೇಕಲವತ್ತಿ ಗ್ರಾಮದ ಬಳಿ ಬರುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಜೋರಾದ ಸ್ಫೋಟದ ಶಬ್ದದಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ ಇದರಿಂದ ಪಕ್ಕದಲ್ಲಿದ್ದ ಟಿಸಿಗೆ (ವಿದ್ಯುತ್ ಪರಿವರ್ತಕಕ್ಕೆ) ಬಸ್ ಡಿಕ್ಕಿ ಹೊಡೆದಿದೆ. ಸ್ಫೋಟಕ್ಕೂ 5 ನಿಮಿಷಗಳ ಮುನ್ನ ಹಿಂದಿನ ನಿಲ್ದಾಣದಲ್ಲಿ 45 ವಿದ್ಯಾರ್ಥಿಗಳು ಬಸ್‌ನಿಂದ ಇಳಿದಿದ್ದರು. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸಿನ ಟೈಯರ್ ಅಂಚಿಗೆ (ರಿಮ್‌ಗೆ) ನಾಡಬಾಂಬ್ ತಗುಲಿ ಸ್ಫೋಟಗೊಂಡಿದ್ದರಿಂದ ದುರಂತದ ಪ್ರಮಾಣ ಕಡಿಮೆ ಆಗಿದೆ. ಒಂದು ವೇಳೆ ಬಾಂಬ್ ಟೈಯರ್‌ಗಳ ನಡುವೆ ಅಥವಾ ಬಸ್‌ನ ಮುಖ್ಯ ಭಾಗದ ಅಡಿಯಲ್ಲಿ ಸ್ಫೋಟಗೊಂಡಿದ್ದರೆ, ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗುವ ಸಾಧ್ಯತೆ ಇತ್ತು. ಘಟನೆಯ ನಂತರ ಪ್ರತಿಕ್ರಿಯಿಸಿದ ಬಸ್ ಚಾಲಕ ಬಸವರಾಜ್ ಅವರು, ‘ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ’ ಎಂದು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026