LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಸ್ತೆ ಅಗಲೀಕರಣಕ್ಕೆ ಮುಖ್ಯಮಂತ್ರಿಗಳಿಂದ ಗ್ರೀನ್ ಸಿಗ್ನಲ್: ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ)

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಅಭಿವೃದ್ಧಿಯ ವಿಚಾರ ಕುರಿತಂತೆ ಮುಖ್ಯಮಂತ್ರಿಯ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಚಿತ್ರದುರ್ಗ ತಾಲೂಕು ಶಾಸಕರಾದ ಕೆ.ಸಿ ವೀರೇಂದ್ರ (ಪಪ್ಪಿ) ಅವರು ಚರ್ಚಿಸಿದ್ದಾರೆ.

ಬೆಂಗಳೂರಿನ ವಿಕಾಸ ಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚಿತ್ರದುರ್ಗ ನಗರದ ಅಭಿವೃದ್ಧಿ ವಿಚಾರದ ಬಗ್ಗೆ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವರು ಚರ್ಚಿಸಿ ಅಭಿವೃದ್ಧಿ ಕಾರ್ಯಗಳ ಕ್ರಮ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ.

ಚಿತ್ರದುರ್ಗ ನಗರದ ಮುಖ್ಯ ರಸ್ತೆ ಅಗಲೀಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ಮುಖ್ಯ ರಸ್ತೆಯನ್ನ ಡಿಪಿಆರ್ ಮಾಡುವಂತೆ ನಿರ್ದೇಶನವನ್ನು ನೀಡಿದ್ದಾರೆ ಮತ್ತು ಚಿತ್ರದುರ್ಗ ನಗರದ ಹೊರವಲಯದ ಕುಂಚಿಗನಾಳ್ ಬಳಿ ಇರುವ ನೂತನ ಜಿಲ್ಲಾಧಿಕಾರಿ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ವಸತಿಗೃಹದ ಸಮೀಪದಲ್ಲಿ ನೂತನವಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ನಿರ್ಮಿಸುವಂತೆ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಹೊಸದುರ್ಗದ ಶಾಸಕ ಗೋವಿಂದಪ್ಪ, ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ)  ಅವರು ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026