Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಗೃಹಜ್ಯೋತಿ ನೋಂದಣಿ 18 ರಿಂದ

 

ಬೆಂಗಳೂರು:
ಉಚಿತ ವಿದ್ಯುತ್ ಪೂರೈಸುವ ‘ಗೃಹ ಜ್ಯೋತಿ’ ಯೋಜನೆಯ ನೋಂದಣಿ ಜೂನ್ 18ರಿಂದ ಆರಂಭವಾಗಲಿದೆ.

ಈ ಯೋಜನೆಯ ಲಾಭ ಪಡೆಯಲು ಇಚ್ಚಿಸುವ ಫಲಾನುಭವಿಗಳು ವಿಶೇಷವಾಗಿ ಸೃಜಿಸಲಾಗಿರುವ ಸೇವಾ ಸಿಂಧು ರ್ಟಲ್‌ನಲ್ಲಿ (https://sevasindhugs.karnataka.gov.in/gruhajyothi) ನೋಂದಾಯಿಸಬೇಕು. ಈ ತಂತ್ರಾಂಶವನ್ನು ಮೊಬೈಲ್ ಫೋನ್, ಕಂಪ್ಯೂಟರ್, ಲ್ಯಾಪ್‌ಟ್ಯಾಪ್‌ನಲ್ಲಿಯೂ ಬಳಸಬಹುದಾಗಿದೆ.

ಫಲಾನುಭವಿಗಳು ಆಧಾರ್ ಕಾರ್ಡ್, ವಿದ್ಯುತ್ ಖಾತೆ ಸಂಖ್ಯೆಯ ಮಾಹಿತಿಯನ್ನು (ವಿದ್ಯುತ್ ಬಿಲ್‌ನಲ್ಲಿ ಇರುವಂತೆ) ನೋಂದಣಿ ಸಮಯದಲ್ಲಿ ನೀಡಬೇಕು. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ಯಾವುದೇ ಎಸ್ಕಾಂಗಳ ಸ್ಥಳೀಯ ಕಚೇರಿಗಳಲ್ಲಿಯೂ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಎಸ್ಕಾಂಗಳ ಸ್ಥಳೀಯ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 24x7 ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆ ಮಾಡಬಹುದು ಎಂದು ಇಂಧನ ಇಲಾಖೆ ತಿಳಿಸಿದೆ.

ಗೃಹ ಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌‌ವರೆಗಿನ ಬಳಕೆಯ ಮಿತಿಯಲ್ಲಿ, ಗ್ರಾಹಕರು ಮಾಸಿಕ ಸರಾಸರಿ ಬಳಸಿದ (2022-23ರ ಆರ್ಥಿಕ ವರ್ಷದಲ್ಲಿ ವಿದ್ಯುತ್‌ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ 10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿರುತ್ತಾರೆ. ರಾಜ್ಯದ 2.14 ಕೋಟಿ ಗೃಹ ಬಳಕೆ ಗ್ರಾಹಕರಿಗೆ ಇದರಿಂದ ಅನುಕೂಲವಾಗಲಿದೆ. ಆಗಸ್ಟ್1ರಿಂದ (ಜುಲೈ ತಿಂಗಳ ಬಿಲ್‌) ಯೋಜನೆ ಜಾರಿಗೆ ಬರಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ