LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್: ಹೆಸರು ನೋಂದಣಿಗೆ ಆಹ್ವಾನ


ಬಳ್ಳಾರಿ,ಫೆ.11

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ಮಹಿಳಾ ಉದ್ದಿಮೆದಾರರನ್ನು ನೋಂದಾಯಿಸಲುಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್ ರೂಪಿಸಿದ್ದು, ಅರ್ಹರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಆಭಿವೃದ್ಧಿಗೊಳಿಸಲು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಮಹಿಳಾ ಉದ್ಯಮಿದಾರರನ್ನಾಗಿ ಮಾಡಲು ಹಾಗೂ ಮಹಿಳೆಯರು ಉತ್ಪಾದಿಸುವ ಹಾಗೂ ತಯಾರಿಸುವ ವಿವಿಧ ವಸ್ತುಗಳಿಗೆ ಉಚಿತ ಮಾರುಕಟ್ಟೆ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಗೃಹಲಕ್ಷ್ಮಿ ಡಿಜಿಟಲ್ ವೇದಿಕೆಯ ಸೌಲಭ್ಯದಲ್ಲಿ ಕಲ್ಪಿಸಲಾಗಿದ್ದು, ಇದರ ಪೂರಕಗಾಗಿ ಗೃಹಲಕ್ಷಿö್ಮ ಡಿಜಿಟಲ್ ಮಾರ್ಕೆಟಿಂಗ್ ಆಪ್ ಅನ್ನು ಲಾಂಚ್ ಮಾಡಲಾಗಿದೆ. ಹಾಗಾಗಿ ಅರ್ಹ ಮಹಿಳಾ ಉದ್ಯಮಿಗಳು ನೋಂದಾಯಿಸಿಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ.

*ಅರ್ಹರು:*

ಸ್ತ್ರೀ ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು, ಎನ್‌ಆರ್‌ಎಲ್‌ಎಂ ಫಲಾನುಭವಿಗಳು ಹಾಗೂ ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ-ಘಟಕಗಳ ಮಹಿಳಾ ಉದ್ಯಮಿಗಳು, ರುಡ್‌ಸೆಟ್ (ಧರ್ಮಸ್ಥಳ) ಮೂಲಕ ತರಬೇತಿ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಮಹಿಳೆಯರು ಅರ್ಹರಾಗಿರುತ್ತಾರೆ.

ನಿಗಮದಿಂದ ಹಾಗೂ ಸರ್ಕಾರದ ವಿವಿಧ ನಿಗಮ ಮಂಡಳಿ ಮತ್ತು ಇಲಾಖೆಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ದಿಮೆದಾರರು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ನಗರದ ಎಸ್.ಪಿ ವೃತ್ತದ ಬಳಿಯ ದೇವಿನಗರದ ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು