LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮದುವೆಗೆ 1 ಗಂಟೆ ಮುಂಚೆ ಸೀರೆ ವಿಚಾರಕ್ಕೆ ವಧುವನ್ನು ಕೊಂದ ವರ !

ಗಾಂಧೀನಗರ :ಸೀರೆ ವಿಚಾರಕ್ಕೆ ಜಗಳವಾಗಿ ವಧುವನ್ನು ವರ ಹತ್ಯೆ ಮಾಡಿರುವ ಘಟನೆ ಗುಜರಾತ್‌ನ ಭಾವನಗರದಲ್ಲಿ ನಡೆದಿದೆ. ಜೋಡಿಯ ಮದುವೆಗೆ ಕೇವಲ ಒಂದು ಗಂಟೆ ಇದ್ದಾಗಲೇ ಕೊಲೆಯಾಗಿದೆ.

ಪ್ರಭುದಾಸ್ ಸರೋವರದ ಟೆಕ್ರಿ ಚೌಕ್ ಬಳಿ ವಧು-ವರರ ನಡುವೆ ಸೀರೆ ಮತ್ತು ಹಣದ ವಿಚಾರಕ್ಕೆ ಜಗಳವಾಗಿತ್ತು. ಸೋನಿ ಹಿಮ್ಮತ್‌ ರಾಥೋಡ್‌ ಹತ್ಯೆಯಾದ ಮಹಿಳೆ. ಸಜನ್ ಬರಯ್ಯ ಹತ್ಯೆ ಮಾಡಿದ ವರ.‌

ಇವರಿಬ್ಬರೂ ಕಳೆದ ಒಂದೂವರೆ ವರ್ಷದಿಂದ ಲಿವಿಂಗ್‌ ರಿಲೇಷನ್‌ಶಿಪ್‌ನಲ್ಲಿದ್ದರು. ನಂತರ ಇಬ್ಬರು ಮದುವೆಯಾಗಲು ನಿರ್ಧರಿಸಿದರು. ಅದರಂತೆ ನಿಶ್ಚಿತಾರ್ಥ ಕೂಡ ನಡೆದಿತ್ತು. ಶನಿವಾರ ಇಬ್ಬರೂ ಹಸೆಮಣೆ ಏರಬೇಕಿತ್ತು.

ಆದರೆ, ಮದುವೆಗೆ ಕೇವಲ ಒಂದು ಗಂಟೆ ಮೊದಲು ಸೀರೆ ಮತ್ತು ಹಣದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಪದ ಭರದಲ್ಲಿ ಸಜನ್, ಸೋನಿಗೆ ಕಬ್ಬಿಣದ ಪೈಪ್‌ನಿಂದ ಹೊಡೆದಿದ್ದಾನೆ. ಬಳಿಕ ಆಕೆಯ ತಲೆಯನ್ನು ಗೋಡೆಗೆ ಡಿಕ್ಕಿ ಹೊಡೆಸಿದ್ದಾನೆ.

ಆರೋಪಿಗಳು ಮನೆಯನ್ನು ಧ್ವಂಸ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಹಿತಿ ಪಡೆದ ಪೊಲೀಸ್ ತಂಡವು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳಕ್ಕೆ ಧಾವಿಸಿದೆ. ಮದುವೆಗೂ ಮುನ್ನ ಆರೋಪಿ ನೆರೆಹೊರೆಯವರೊಂದಿಗೆ ಜಗಳ ಮಾಡಿಕೊಂಡಿದ್ದ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈಗ ಕೊಲೆ ಪ್ರಕರಣದಲ್ಲೂ ಆತನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026