LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

 

ದಾವಣಗೆರೆ: ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗಗಳ 22 ವಸತಿ ಶಾಲೆಗಳಲ್ಲಿ  ಪ್ರಸಕ್ತ ಸಾಲಿಗೆ  6 ರಿಂದ 10ನೇ ತರಗತಿ (ವಸತಿ ಶಾಲೆ) ಹಾಗೂ ಪದವಿ ಪೂರ್ವ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು, ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ:  ಕನ್ನಡ, ಇಂಗ್ಲೀಷ್, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ,  ಜೀವಶಾಸ್ತ್ರ ಉಪನ್ಯಾಸಕರ ತಲಾ 1 ಹುದ್ದೆಗಳಿಗೆ ಎಂ.ಎ, ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು. ಗಣಕವಿಜ್ಞಾನ ಉಪನ್ಯಾಸಕರ ಹುದ್ದೆಗೆ ಎಂಎಸ್ಸಿ ಕಂಪ್ಯೂಟರ್ ಸೈನ್ಸ್, ಎಂ.ಸಿ.ಎ, ಬಿ.ಇ & ಸಿ.ಎಸ್ &ಐ.ಎಸ್ ಮತ್ತು ಶಿಕ್ಷಕರ ಹುದೆಗಳಾದ ಕನ್ನಡ, ಆಂಗ್ಲ, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಶಿಕ್ಷಕರು ಸಂಬಂಧಿಸಿದ ವಿಷಯದಲ್ಲಿ ಪದವಿ ಮತ್ತು ಬಿ.ಇಡಿ(ಟಿ.ಇ.ಟಿ ಉತ್ತೀರ್ಣರಾದವರಿಗೆ ಮೊದಲ ಆದ್ಯತೆ), ಗಣಕ ವಿಜ್ಞಾನ ಶಿಕ್ಷಕರು ಪದವಿ ಬಿ.ಎಸ್ಸಿ, ಬಿಸಿಎ, ಬಿ.ಇ, ದೈಹಿಕ ಶಿಕ್ಷಣ ಶಿಕ್ಷಕರು ಬಿ.ಪಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು.

ಅರ್ಹರು ಅರ್ಜಿ ಹಾಗೂ ದೃಢೀಕರಿಸಿದ ದಾಖಲೆಗಳ ಪ್ರತಿಗಳನ್ನು ಜೂನ್ 18 ರ ಒಳಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಜಂಟಿ ನಿರ್ದೇಶಕರಾದ ನಾಗರಾಜ.ಕೆ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026