E-PAPER
16 Nov 2026, 02:19:43 AM|
Gold₹13605/gGold24K ₹13,605/g - 22K ₹12,460/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗುರುಸಿದ್ದ ಸ್ವಾಮೀಜಿ ಅಮೃತ ಮಹೋತ್ಸವ ಆಚರಣೆ

ಗುರುಸಿದ್ದ ಸ್ವಾಮೀಜಿ ಅಮೃತ ಮಹೋತ್ಸವ ಆಚರಣೆ

ಬೆಳಗಾವಿ: ಶಿವಬಸವ ನಗರ ಕಾರಂಜಿ ಮಠದ ರಜತ ಮಹೋತ್ಸವ ಹಾಗೂ ಪೀಠಾಧಿಪತಿ ಶ್ರೀ ಗುರುಸಿದ್ದ ಸ್ವಾಮೀಜಿ ಅವರು ಸಾರ್ಥಕ 75 ವಸಂತಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ವೀರಶೈವ- ಲಿಂಗಾಯತ ಸಮಾಜದಿಂದ ಅಮೃತ ಮಹೋತ್ಸವ ಸಮಾರಂಭವನ್ನು ನ. 11 ರಂದು ಆಯೋಜಿಸಲು ತೀರ್ಮಾನಿಸಲಾಗಿದೆ.

ಇಲ್ಲಿನ ಕನ್ನಡ ಭವನದಲ್ಲಿ ಬುಧವಾರ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡ ವಿವಿಧ ಮಠಾಧೀಶರು ಹಾಗೂ ವೀರಶೈವ- ಲಿಂಗಾಯತ ಸಮಾಜದ ಮುಖಂಡರು, ಸಮಾರಂಭವನ್ನು ಅರ್ಥಪೂರ್ಣ ಮತ್ತು ಅಚ್ಚುಕಟ್ಟಾಗಿ ಆಯೋಜಿಸುವುದಕ್ಕಾಗಿ ವಿವಿಧ ಸಮಿತಿಗಳಿಗೆ ಜವಾಬ್ದಾರಿ ಹಂಚಿ, ಸಂಪೂರ್ಣ ರೂಪುರೇಷೆಗಳ ಬಗ್ಗೆ ಚರ್ಚಿಸಿದರು. ಬಳಿಕ ಕೆಎಲ್‌ಇ ಸಂಸ್ಥೆಯ ಜೀರಗೆ ಸಭಾಭವನದಲ್ಲಿ ಸಮಾರಂಭ ಆಯೋಜಿಸಲು ಒಮ್ಮತ ಸೂಚಿಸಿ, ನಿರ್ಧಾರ ಮಾಡಲಾಯಿತು.

ಬೆಳಗಾವಿಯ ಕನ್ನಡಭವನದಲ್ಲಿ ಕಾರಂಜಿಮಠದ ಶ್ರೀಗಳ ಅಮೃತ ಮಹೋತ್ಸವ ಆಚರಣೆ ಪೂರ್ವಭಾವಿ ಸಭೆ ಜರುಗಿತು.

ಸ್ಥಳೀಯ ಕಾರಂಜಿಮಠ, ನಾಗನೂರು ಮಠ ಸೇರಿದಂತೆ ಜಿಲ್ಲೆಯ ಹಾಗೂ ರಾಜ್ಯದಲ್ಲಿನ ಎಲ್ಲ ಮಠಮಾನ್ಯಗಳ ಮಹತ್ವ ಮಠಾಧೀಶರು ಸಮಾಜಕ್ಕೆ ಸಲ್ಲಿಸಿದ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಮಠಾಧೀಶರ ಕುರಿತಾದ ಗ್ರಂಥಗಳ ರಾಜ್ಯಮಟ್ಟದ ಪುಸ್ತಕ ಉತ್ಸವ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ನಡೆಸುವುದರ ಕುರಿತು ಚರ್ಚೆ ನಡೆಸಿದರು.

ಅಲ್ಲದೆ, ವೀರಶೈವ- ಲಿಂಗಾಯತ ಸಮಾಜದ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು, ಎಲ್ಲ ಮಠಾಧೀಶರನ್ನು ಆಹ್ವಾನಿಸಿ ಕೆಎಲ್‌ ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ಆಯೋಜಿಸುವಂತೆ ನಿರ್ಧರಿಸಲಾಯಿತು.

ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಮಾತನಾಡಿ, 'ಸಾಮಾನ್ಯರ ಜತೆ ಸಾಮಾನ್ಯರಾಗಿ ಬೆರೆಯುತ್ತಾ, ಕಷ್ಟದಲ್ಲಿದ್ದವರಿಗೆ ಸಹಾಯ, ಮಾರ್ಗದರ್ಶನ ಮಾಡುತ್ತಿರುವ ಶ್ರೀ ಗುರುಸಿದ್ದ ಸ್ವಾಮೀಜಿ ಅವರು ನಮಗೆಲ್ಲರಿಗೂ ಮಾದರಿ. ಅವರ ಸಮಾಜ ಸೇವೆ ಸ್ಮರಿಸುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಇಡೀ ನಾಡು ಕಣ್ತೆರೆದು ನೋಡುವಂತೆ ಆಚರಿಸಬೇಕು ಎಂದು ಆಶಿಸಿದರು. ಸಭೆಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಕಾರಂಜಿಮಠದ ಉತ್ತರಾಧಿಕಾರಿ ಶಿವಯೋಗಿದೇವರು.

ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಮಹಾಂತೇಶ ಕವಟಗಿಮಠ ಮಾತನಾಡಿ, ''ಶ್ರೀ ಗುರುಸಿದ್ದ ಸ್ವಾಮೀಜಿ ಅವರು ಕಾರಂಜಿ ಮಠದ 4ನೇ ಪೀಠಾಧಿಪತಿಗಳಾಗಿ ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಸಾಕಷ್ಟು ರಚನಾತ್ಮಕ ಕಾರ್ಯಗಳನ್ನು ಮಾಡಿ ಸಮಾಜಕ್ಕೆ ಮಹತ್ವದ ಸೇವೆ ಸಲ್ಲಿಸಿದ್ದಾರೆ. ಸ್ವಂತ ತಂದೆ-ತಾಯಿ ಸೇರಿದಂತೆ ತಮ್ಮ ಕುಟುಂಬವನ್ನೇ ತೊರೆದು, ಸಮಾಜದಲ್ಲಿನ ಇತರರ ತಾಯಿ- ತಂದೆಯನ್ನೇ ಸ್ವಂತ ಪಾಲಕರೆಂದು ಪರಿಗಣಿಸಿ ಇಡೀ ಜೀವನವನ್ನೇ ಸಮಾಜದ ಉದ್ದಾರಕ್ಕಾಗಿ ಮುಡಿಪಾಗಿಟ್ಟಿರುವ ಸ್ವಾಮೀಜಿಗಳನ್ನು ಅವರ ಸಮಾಜಮುಖಿ ಕಾರ್ಯವನ್ನು ಗೌರವಿಸುವುದು ಜವಾಬ್ದಾರಿ ಎಂದರು.

ಈ ಸಭೆಯಲ್ಲಿ ನ್ಯಾಯವಾದಿ ಎಂ.ಬಿ.ಝಿರಲಿ, ಶಂಕರಗೌಡ ಪಾಟೀಲ, ಅನೀಲ ಬೆನಕೆ, ಮುರುಘಂದ್ರಗೌಡ ಪಾಟೀಲ, ರತ್ನಪ್ರಭಾ ಬೆಲ್ಲದ ಹಾಗೂ ಇತರರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ ಜಿನದತ್ತ ದೇಸಾಯಿಯವರ ಬದುಕು ಬರಹ ನಮಗೆಲ್ಲ ಮಾದರಿ- ಪ್ರಾ ಬಿ ಎಸ್ ಗವಿಮಠ CCEA ಮತ್ತು ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ ನಡುವೆ ಮಹತ್ವದ ಒಪ್ಪಂದಕ್ಕೆ ಸಹಿಅಂಜುಮನ್ ಪದವಿ ಕಾಲೇಜಿಗೆ ಚಾಂಪಿಯನಶಿಪ್‌ ಪ್ರಶಸ್ತಿಉತ್ತರ ಕರ್ನಾಟಕದ ಹಿರಿಯ ರಾಜಕೀಯ ಮುತ್ಸದ್ದಿ , ಮಾಜಿ ಸಚಿವ, ಶಿವಾನಂದ ಕೌಜಲಗಿ ಲಿಂಗೈಕ್ಯರಾಗಾಆವಿವಿ, ವಿಧಾನಸೌಧ ಸೇರಿದಂತೆ ಪ್ರಮುಖ ಸರ್ಕಾರಿ ಹಾಗೂ ಐತಿಹಾಸಿಕ ಕಟ್ಟಡಗಳಿಗೆ ಪಿಂಕ್ ಲೈಟಿಂಗ್ : ಕುಲಪತಿ ಡಾ.ಭಗವಾನ್ ಬಿ.ಸಿಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerರಾಜಾ ಲಖಮಗೌಡರು, ಶಿರಸಂಗಿ ಲಿಂಗರಾಜರು ಮತ್ತು  ಪಾಟೀಲ ಪುಟ್ಟಪ್ಪ ಭಾವ ಚಿತ್ರಗಳನ್ನು ಆಹ್ವಾನ ಪತ್ರಿಕೆಗಳಲ್ಲಿ ಮುದ್ರಿಸಬೇಕು ; ಡಾ.ಸರಜೂ ಕಾಟ್ಕರಭ್ರಷ್ಟಾಚಾರ ರಹಿತ ಸಮ ಸಮಾಜ ನಿರ್ಮಾಣ ಶರಣರ ತತ್ವಗಳಿಂದ ಮಾತ್ರ ಸಾಧ್ಯ ; ಡಾ.ಬಸವರಾಜ ಹುಲಮನಿನಿಯಮ ಉಲ್ಲಂಘಿಸುವ ಹೋಟೆಲ್, ಪಬ್, ಡಾಬಾಗಳ ವಿರುದ್ಧ ಕಠಿಣ ಕ್ರಮ: ಪೊಲೀಸ್ ಕಮಿಷನರ್ ನಿಕ್ಕಂ ಎಚ್ಚರಿಕೆಜೆಎಲ್ಎಂ ಕಚೇರಿಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ