LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ - 1,000 ರೂ.ಗೆ ಏರಿಕೆ

ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ.

21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಇದರ ಬೆನ್ನಲ್ಲೇ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮನ) (ಕರ್ನಾಟಕ ತಿದ್ದುಪಡಿ) ಅಧಿನಿಯಮ 2024 ಜಾರಿ ಮಾಡಿ ರಾಜ್ಯ ಸರ್ಕಾರ, ಗೆಜಟ್ ನೋಟಿಫಿಕೇಷನ್ ಹೊರಡಿಸಿದೆ.

ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು ಕರ್ನಾಟಕ ರಾಜ್ಯಕ್ಕೆ ಅನ್ವಯಿಸಿ ತಿದ್ದುಪಡಿ ಮಾಡಲಾಗಿದೆ. ಕೇಂದ್ರ ಅಧಿನಿಯಮಕ್ಕೆ ತಿದ್ದುಪಡಿ ತಂದಿರುವುದರಿಂದ ಈ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿ ಕೊಡಲಾಗಿತ್ತು.

ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ರಾಜ್ಯದಲ್ಲಿ 21 ವಯೋಮಿತಿ ಒಳಗಿನ ವ್ಯಕ್ತಿಗಳಿಗೆ ಸಿಗರೇಟು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಮಾರಾಟಕ್ಕೆ ಅನುಮತಿ ನೀಡುವಂತಿಲ್ಲ. ಪ್ರಸ್ತುತ ತಂಬಾಕು ಉತ್ಪನ್ನಗಳನ್ನು ಖರೀದಿಸುವುದಕ್ಕೆ ಕನಿಷ್ಠ ವಯೋಮಾನ 18 ಇದೆ. ಈಗ ಆ ವಯೋಮಾನವನ್ನು 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಶಿಕ್ಷಣ ಸಂಸ್ಥೆಯ 100 ಮೀಟರ್ ಸುತ್ತಳತೆಯೊಳಗಿನ ಪ್ರದೇಶದೊಳಗೆ, ಬಿಡಿಯಾಗಿ ಅಥವಾ ಒಂಟಿ ಕಡ್ಡಿಯಾಗಿ ಸಿಗರೇಟ್ ಮಾರಾಟವನ್ನು ನಿಷೇಧಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸಲಾಗಿದೆ‌. ಯಾವುದೇ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನವನ್ನು ಬಳಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಮತ್ತು ತಂಬಾಕು ಉಗಿಯುವಂತಿಲ್ಲ. ಈ ತಿದ್ದುಪಡಿ ಕಾಯ್ದೆ ಪ್ರಕಾರ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದಕ್ಕೆ ನಿಷೇಧಿಸಲಾಗಿದೆ. ಯಾರೇ ವ್ಯಕ್ತಿಯು ತಾನಾಗಿಯಾಗಲಿ ಅಥವಾ ಯಾರೇ ಇತರ ವ್ಯಕ್ತಿಯ ಪರವಾಗಿಯಾಗಲಿ ಉಪಹಾರ ಗೃಹ ಅಥವಾ ಪಬ್ ಅಥವಾ ಬಾರು ಅಥವಾ ರೆಸ್ಟೋರೆಂಟ್ ಒಳಗೊಂಡಂತೆ ಯಾವುದೇ ಸ್ಥಳದಲ್ಲಿ ಹುಕ್ಕಾ ಬಾರನ್ನು ತೆರೆಯುವಂತಿಲ್ಲ ಹಾಗೂ ನಡೆಸುವಂತಿಲ್ಲ.

ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿ ನಿಯಮ‌ ಉಲ್ಲಂಘಿಸಿದವರಿಗೆ ದಂಡದ ಪ್ರಮಾಣವನ್ನು 200 ರೂ.ದಿಂದ 1,000 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು ಹುಕ್ಕಾ ಬಾರ್ ನಡೆಸಿ ನಿಯಮ ಉಲ್ಲಂಘಿಸುವವರಿಗೆ 1 ವರ್ಷದಿಂದ 3 ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿದಿಂದ 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026