Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

Hasanamba Temple: ಅ.29ರಿಂದ ಹಾಸನಾಂಬೆ ದರ್ಶನ ಆರಂಭ: ವಿವಿಐಪಿ, ಸಾಮಾನ್ಯ ಜನರ ದರ್ಶನಕ್ಕೆ ಪ್ರತ್ಯೇಕ ಸಮಯ ನಿಗದಿ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಐತಿಹಾಸಿಕ ಹಾಗೂ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವವು ಅಕ್ಟೋಬರ್ 29 ರಿಂದ ನವೆಂಬರ್ 11 ರವರೆಗೆ ಅದ್ಧೂರಿಯಾಗಿ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಭರದಿಂದ ಕೈಗೊಂಡಿದೆ. ಕಳೆದ ಬಾರಿಗಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯುವುದನ್ನು ತಪ್ಪಿಸಿ ಸುಗಮ ಹಾಗೂ ಸುರಕ್ಷಿತ ದರ್ಶನ ಕಲ್ಪಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.

ಡಿಕೆಶಿಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಅಕ್ಟೋಬರ್ 29 ರಿಂದ ಆರಂಭವಾಗಲಿರುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾಡಳಿತದ ಪರವಾಗಿ ಇಂದು (ಅಕ್ಟೋಬರ್ 23) ಬೆಂಗಳೂರಿನಲ್ಲಿ ಅಧಿಕೃತ ಆಹ್ವಾನ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಹಾಸನ ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಲತಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶುಭನ್ವಿತಾ ಅವರು ಭೇಟಿ ನೀಡಿ ಆಹ್ವಾನ ಪತ್ರಿಕೆ ನೀಡಿದರು. ಇದರೊಂದಿಗೆ ಮುಖ್ಯಮಂತ್ರಿಗಳು, ಸಚಿವರು ಸೇರಿದಂತೆ ಪ್ರಮುಖ ಗಣ್ಯರಿಗೂ ಆಹ್ವಾನ ರವಾನಿಸಲಾಗಿದೆ.

ವಿವಿಐಪಿಗಳಿಗೆ ಪ್ರತ್ಯೇಕ ಸಮಯ: ಸಾರ್ವಜನಿಕರಿಗೆ ಇಡೀ ದಿನ ದರ್ಶನ

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶಿವಲಿಂಗೇಗೌಡ, ಕಳೆದ ವರ್ಷ 25 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು, ಈ ಬಾರಿಯೂ ದಾಖಲೆ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ ಎಂದರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮೈಸೂರು ದಸರಾದ ಮಾದರಿಯಲ್ಲಿಯೇ ಅಚ್ಚುಕಟ್ಟಾಗಿ ಸಿದ್ಧತೆ ಮಾಡಲಾಗಿದೆ. ವಿವಿಐಪಿಗಳ ದರ್ಶನಕ್ಕಾಗಿ ನಿತ್ಯ ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30 ರವರೆಗೆ ಮಾತ್ರ (2 ಗಂಟೆ) ಸಮಯ ನಿಗದಿಪಡಿಸಲಾಗಿದೆ. ಉಳಿದ ಪೂರ್ಣ ಸಮಯದಲ್ಲಿ ಸಾಮಾನ್ಯ ಭಕ್ತರಿಗೆ ದರ್ಶನಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ನಿಗದಿತ ಸಮಯ ತಪ್ಪಿದರೆ ಮರುದಿನವೇ ಬರಬೇಕು: ಸಚಿವರ ಸ್ಪಷ್ಟನೆ

ವಿವಿಐಪಿ ದರ್ಶನಕ್ಕೆ ಒಟ್ಟು 3,500 ಜನರಿಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಬಾರದಿದ್ದರೆ ಅಂತಹವರು ಮರುದಿನವೇ ಬರಬೇಕಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಇದರೊಂದಿಗೆ ಸಾರ್ವಜನಿಕರಿಗೆ 1,000 ರೂಪಾಯಿ ಮೌಲ್ಯದ ವಿಶೇಷ ದರ್ಶನದ ಪಾಸ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಹಾಸನಾಂಬೆ ಉತ್ಸವವನ್ನು ಅತ್ಯಂತ ಪವಿತ್ರವಾಗಿ ಮತ್ತು ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಜಿಲ್ಲಾಡಳಿತದೊಂದಿಗೆ ಕಳೆದ 15 ದಿನಗಳಿಂದ ಹಗಲಿರುಳು ಶ್ರಮಿಸಲಾಗುತ್ತಿದೆ ಎಂದರು.

ಮೈಸೂರು ದಸರಾದ ಘಟನೆ ಹಾಸನದಲ್ಲಿ ಮರುಕಳಿಸಲ್ಲ

ಇತ್ತೀಚೆಗೆ ಮೈಸೂರು ದಸರಾದ ನಂದಿಧ್ವಜ ಪೂಜೆ ವೇಳೆ ಮೂವರು ಸಚಿವರನ್ನು ಎಸ್ಪಿ ತಡೆದ ಘಟನೆಗೆ ಪ್ರತಿಕ್ರಿಯಿಸಿದ ಸಚಿವರು, "ಅಲ್ಲಿ ವಾಸ್ತವವಾಗಿ ಏನು ನಡೆದಿದೆ ಎಂಬ ಮಾಹಿತಿ ನನಗಿಲ್ಲ. ಆದರೆ ಜನಪ್ರತಿನಿಧಿಗಳು ಹಾಗೂ ಸಚಿವರನ್ನು ತಡೆದಿರುವುದು ತಪ್ಪು. ಅಂತಹ ಯಾವುದೇ ಅಹಿತಕರ ಅಥವಾ ಗೊಂದಲದ ಸನ್ನಿವೇಶಗಳು ಹಾಸನಾಂಬೆ ಉತ್ಸವದಲ್ಲಿ ಮರುಕಳಿಸಲು ಬಿಡುವುದಿಲ್ಲ. ಗಣ್ಯರ ಜತೆಗೆ ಸಾಮಾನ್ಯ ಜನರ ದರ್ಶನಕ್ಕೂ ಈ ಬಾರಿ ವಿಶೇಷ ವ್ಯವಸ್ಥೆ ರೂಪಿಸಲಾಗಿದೆ," ಎಂದು ಭರವಸೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!