LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಒತ್ತಾಯಿಸಿದ ಹೆಚ್.ಡಿ.ದೇವೇಗೌಡರು

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರವನ್ನು ಕೋರಿದರು.

ರಾಜ್ಯಸಭೆಯಲ್ಲಿ ರೇಲ್ವೆ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಕರ್ನಾಟಕದ ರೈಲ್ವೆ ಯೋಜನೆಗಳ ಅಗತ್ಯವನ್ನು ಒತ್ತಿ ಹೇಳಿದರು.

ರಾಜ್ಯಕ್ಕೆ ರೇಲ್ವೆ ಹಂಚಿಕೆ ₹800 ರಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ

ಹಿಂದಿನ ಸರ್ಕಾರಗಳು ಕರ್ನಾಟಕದ ಹಲವಾರು ನಿರ್ಣಾಯಕ ರೇಲ್ವೆ ಯೋಜನೆಗಳನ್ನು ನಿರ್ಲಕ್ಷಿಸಿವೆ. ಆದಾಗ್ಯೂ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ರಾಜ್ಯಕ್ಕೆ ರೇಲ್ವೆ ಅನುದಾನ ಹಂಚಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಂಚಿಕೆಯು ₹800 ಕೋಟಿಯಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಬೇಕೆಂದ ಹೆಚ್ಡಿಡಿ

ನರೇಂದ್ರ ಮೋದಿ ಅವರ ಆಡಳಿತದ ಅಡಿಯಲ್ಲಿ ರಾಜ್ಯದ ಅನೇಕ ರೇಲ್ವೆ ಯೋಜೆಗಳಿಗೆ ಮರು ಚಾಲನೆ ಸಿಕ್ಕಿದೆ. ಆದಾಗ್ಯೂ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಮತ್ತು ಬೆಂಗಳೂರಿನಿಂದ ಭಾರತದ ಇತರೆ ಭಾಗಗಳಿಗೆ ಸಂಪರ್ಕ ಸೇರಿದಂತೆ ಹಲವಾರು ಯೋಜನೆಗಳು ಕಾರ್ಯರೂಪಕ್ಕೆ ಬಾರದೆ ಇನ್ನೂ ಬಾಕಿ ಉಳಿದಿವೆ. ಇವುಗಳ ಕಡೆ ರೇಲ್ವೆ ಸಚಿವರು ತಕ್ಷಣ ಗಮನ ಹರಿಸಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು.

ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ರೇಲ್ವೆ ಯೋಜನೆಗಳನ್ನು ಮತ್ತಷ್ಟು ವೇಗಗೊಳಿಸುವಂತೆ ಸರ್ಕಾರವನ್ನು ಪದೇ ಪದೆ ಮನವಿ ಮಾಡಿದ ಅವರು; ರೈಲ್ವೆ ಸಂಪರ್ಕವು ಸಾಮಾನ್ಯ ನಾಗರಿಕರಿಗೆ ಕೈಗೆಟುಕುವ ಪ್ರಯಾಣಕ್ಕೆ ಕಾರಣವಾದ ಕೆಲ ಮಹತ್ವದ ಅಂಶಗಳನ್ನು ಉದಾಹರಣೆ ಸಮೇತವಾಗಿ ಉಲ್ಲೇಖಿಸಿದರು.

ಹಾಸನದಿಂದ ಮೈಸೂರಿಗೆ ರೇಲಿನಲ್ಲಿ ಪ್ರಯಾಣ ಮಾಡಿದರೆ ಟಿಕೆಟ್ ವೆಚ್ಚ ₹30 ಆಗುತ್ತದೆ. ಆದರೆ ಬಸ್ ದರಗಳು ಬಹುತೇಕ ಎರಡು ಪಟ್ಟು ಮೂರು ಪಟ್ಟು ಹೆಚ್ಚಾಗಿರುತ್ತವೆ. ಇದಕ್ಕಾಗಿಯೇ ರೇಲ್ವೆ ಯೋಜನೆಗಳ ವಿಸ್ತರಣೆ ಪೂರ್ಣ ವೇಗದಲ್ಲಿ ಮುಂದುವರಿಯಬೇಕು ಎಂದು ಅವರು ಪ್ರತಿಪಾದಿಸಿದರು.

ಕಳೆದ ಹತ್ತು ವರ್ಷಗಳಲ್ಲಿ ರೇಲ್ವೆ ಕ್ಷೇತ್ರದಲ್ಲಿ ಆಗಿರುವ ಗಮನಾರ್ಹ ಪ್ರಗತಿಯನ್ನು ಮಾಜಿ ಪ್ರಧಾನಿಗಳು ಮುಕ್ತಕಂಠದಿಂದ ಶ್ಲಾಘಿಸಿದರು. ತಮ್ಮ ಅನುಭವದಿಂದ ಹೇಳುತ್ತಿದ್ದೇನೆ, ಕಳೆದ ಎಪ್ಪತ್ತೈದು ವರ್ಷಗಳ ಅಭಿವೃದ್ಧಿಯನ್ನು ಪರಿಶೀಲನೆ ಮಾಡಿ ನೋಡಿದಾಗ ಹತ್ತು ವರ್ಷಗಳ ಅಭಿವೃದ್ಧಿ ಕಣ್ಣಿಗೆ ಕಟ್ಟುವಂತೆ ಕಾಣುತ್ತದೆ ಎಂದು ಅವರು ಹೇಳಿದರು.

ರೇಲ್ವೆ ಸಮತೋಲಿತ ಅಭಿವೃದ್ಧಿ ಬಹಳ ಎಂದು ಪ್ರತಿಪಾದನೆ

ಹಿಂದೆ ಅನುಮೋದನೆ ಪಡೆಯಲು ವರ್ಷಗಳೇ ಹಿಡಿಯುತ್ತಿದ್ದ ರೈಲ್ವೆ ಯೋಜನೆಗಳು ಈಗ ಅಭೂತಪೂರ್ವ ವೇಗದಲ್ಲಿ ಕಾರ್ಯಗತಗೊಳ್ಳುತ್ತಿವೆ ಎಂದ ಅವರು; ತಮ್ಮ ಅಧಿಕಾರಾವಧಿಯಲ್ಲಿ ರೈಲ್ವೆ ಅನುದಾನ ಹಂಚಿಕೆ, ಯೋಜನೆಗಳ ಜಾರಿ ಇತ್ಯಾದಿ ಅಂಶಗಳನ್ನು ನೆನಪು ಮಾಡಿಕೊಂಡರು, ಅಲ್ಲದೆ; ಆಗ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ಮತ್ತು ನಿಧಾನಗತಿಯ ಯೋಜನಾ ಅನುಷ್ಠಾನ ಪರಿಸ್ಥಿತಿಯನ್ನು ನೆನಪಿಸಿಕೊಂಡರು. ಇದಕ್ಕೆ ವ್ಯತಿರಿಕ್ತವಾಗಿ, ದೇಶಾದ್ಯಂತ ರೈಲ್ವೆ ಅಭಿವೃದ್ಧಿಯನ್ನು ಪರಿವರ್ತಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಸ್ಪಷ್ಟ ದೃಷ್ಟಿಕೋನದೊಂದಿಗೆ ಮುನ್ನಡೆಯುತ್ತಿದೆ ಎಂದು ಹೇಳಿದರು.

ರೈಲ್ವೆ ವಿಸ್ತರಣೆ ಮತ್ತು ಸುರಕ್ಷತೆಯಲ್ಲಿ ಗಮನಾರ್ಹ ಸುಧಾರಣೆಗಳು ಕಂಡುಬಂದಿವೆ ಎಂದು ದೇವೇಗೌಡರು; ಕೆಲ ಅಂಶಗಳನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದರು.

ಹಿಂದೆ, ಆಧುನಿಕ ಮೂಲಸೌಕರ್ಯಗಳ ಕೊರತೆಯಿಂದಾಗಿ ರೇಲ್ವೆ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿದ್ದವು. ಆದರೆ ಇಂದು ಸುರಕ್ಷತಾ ಮಾನದಂಡಗಳು ಗಮನಾರ್ಹವಾಗಿ ಸುಧಾರಿಸಿವೆ ಎಂದು ಅವರು ಹೇಳಿದರು. ಇದಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಪ್ರಯತ್ನಗಳು ಕಾರಣ ಎಂದ ಅವರು, ಸಚಿವರನ್ನು ಅವರನ್ನು "ರಾಷ್ಟ್ರದ ಪ್ರಗತಿಗೆ ಬದ್ಧರಾಗಿರುವ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮಿ ನಾಯಕ" ಎಂದು ಬಣ್ಣಿಸಿದರು.

ಅಲ್ಲದೆ, ಭಾರತದ ರೇಲ್ವೆ ಬೆಳವಣಿಗೆಯನ್ನು ಚೀನಾ, ರಷ್ಯಾ, ಕೆನಡಾ ಮತ್ತು ಆಸ್ಟ್ರೇಲಿಯಾದೊಂದಿಗೆ ಹೋಲಿಸಿ ವಿವರಿಸಿದರು. ಭಾರತದ ಪ್ರಗತಿ ಈಗ ಜಾಗತಿಕ ಮಾನದಂಡಗಳಿಗೆ ಸಮನಾಗಿದೆ ಎಂದರಲ್ಲದೆ, ರೇಲ್ವೆ ಮಾರ್ಗಗಳ ವಿಸ್ತರಣೆ, ವಿದ್ಯುದೀಕರಣ ಮತ್ತು ಸರಕು ಸಾಗಣೆ ಕಾರಿಡಾರ್‌ಗಳ ಅಭಿವೃದ್ಧಿ ಗಮನಾರ್ಹವಾಗಿ ಆಗಿದೆ ಎಂದರು ಮೆಚ್ಚುಗೆ ವ್ಯಕ್ತಪಡಿಸಿದರು.

ದೇವೇಗೌಡರು ರೈಲ್ವೆ ಆಧುನೀಕರಣಕ್ಕೆ ಮೋದಿ ಅವರ ಸರ್ಕಾರವು ತೋರಿದ ಬದ್ಧತೆಗೆ ಅಭಿನಂದನೆ ಸಲ್ಲಿಸಿದ ಅವರು; ಕರ್ನಾಟಕದಲ್ಲಿ ಬಾಕಿ ಇರುವ ಯೋಜನೆಗಳನ್ನು ತ್ವರಿತಗೊಳಿಸಬೇಕು ಎಂದು ಒತ್ತಿ ಹೇಳಿದರು. ತಮ್ಮ ಸಲಹೆಗಳು ಟೀಕಿಸುವ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ಎಲ್ಲಾ ಪ್ರದೇಶಗಳಲ್ಲಿ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಆಶಯವನ್ನು ಹೊಂದಿವೆ ಎಂದು ಅವರು ಪುನರುಚ್ಚರಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ