LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ದೇಶಕ್ಕೆ ನರೇಂದ್ರ ಮೋದಿ, ರಾಜ್ಯಕ್ಕೆ ಹೆಚ್‌ಡಿಕೆ'- ನಿಖಿಲ್ ಕುಮಾರಸ್ವಾಮಿ

ಚಿಕ್ಕಬಳ್ಳಾಪುರ : ದೇಶಕ್ಕೆ ನರೇಂದ್ರ ಮೋದಿ, ರಾಜ್ಯಕ್ಕೆ ಕುಮಾರಣ್ಣ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಗೌರಿಬಿದನೂರಿನಲ್ಲಿ ಜನರೊಂದಿಗೆ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಇದು ಕೇವಲ ಜೆಡಿಎಸ್ ಕಾರ್ಯಕರ್ತರ ಭಾವನೆ ಅಷ್ಟೇ ಅಲ್ಲ, ರಾಜ್ಯದ ಜನರ ಭಾವನೆ. ಕುಮಾರಣ್ಣ ಸಿಎಂ ಆಗಿದ್ದಾಗ ಕೊಟ್ಟ ಕೊಡುಗೆಗಳನ್ನ ಜನ ಈಗಲೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅಂತಹ ವ್ಯಕ್ತಿ ಸಿಎಂ ಆದರೆ ರಾಜ್ಯದಲ್ಲಿ ಸಮೃದ್ಧಿಯ ವಾತವಾರಣ ನಿರ್ಮಾಣವಾಗಲಿದೆ. ನಾನು ರಾಜ್ಯದ ನಾನಾ ಕಡೆ ಪ್ರವಾಸ ಮಾಡಿದಾಗ, ಜನ ಕುಮಾರಣ್ಣ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ" ಎಂದರು.

ಜೆಡಿಎಸ್-ಬಿಜೆಪಿ ಮೈತ್ರಿ ಶಾಶ್ವತವಾಗಿ ಇರಲಿದೆ. ಮುಂದಿನ 2028 ರಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಗೆ 180 ಸ್ಥಾನಗಳು ಸಿಗಲಿದ್ದು, ಸರ್ಕಾರ ರಚನೆ ಮಾಡಲಿದ್ದೇವೆ. ನಮ್ಮ ನಾಯಕರು ಕುಮಾರಣ್ಣ. ಫೇಸ್ ವ್ಯಾಲ್ಯೂ ಇರುವ ನಾಯಕರು ದೇವೇಗೌಡರು, ಕುಮಾರಣ್ಣ. ಕುಮಾರಣ್ಣ ಸಿಎಂ ಆಗಬೇಕು ಎಂಬುದು ನಮ್ಮ ಅಪೇಕ್ಷೆ ಅಲ್ಲ, ಇದು ಕಾರ್ಯಕರ್ತರ ಅಪೇಕ್ಷೆ ಎಂದು ಹೇಳಿದರು.

ನಾವು 3 ವರ್ಷ ಯಾವುದೇ ವಾಮಮಾರ್ಗದಿಂದ ಅಧಿಕಾರ ಹಿಡಿಯಲ್ಲ. ಮುಂದೆ 2028ರಲ್ಲಿ 180 ಸ್ಥಾನ ಪಡೆದು ಕೇಂದ್ರದ ನಾಯಕರ ಜೊತೆ ಚರ್ಚೆ ಮಾಡಿ ಸಿಎಂ ಸ್ಥಾನದ ತೀರ್ಮಾನ ಮಾಡಲಿದ್ದೇವೆ ಎಂದು ತಿಳಿಸಿದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026