LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅನಧಿಕೃತ ಗೈರು: ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು ಆದವರು ಇವರು.!

 

ಚಿತ್ರದುರ್ಗ: ಪದೇ ಪದೇ ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯ ನಿರ್ಲಕ್ಷತೆ ತೋರಿದ ಕಾರಣಕ್ಕಾಗಿ ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕ ಟಿ.ಎನ್.ವಿನಯ್ ಕುಮಾರ್ ಹಾಗೂ ಹೊಸದುರ್ಗ  ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೇಡ್-2 ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಎನ್.ರಂಗಸ್ವಾಮಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶಿಸಿದ್ದಾರೆ.

ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕ ಟಿ.ಎನ್.ವಿನಯ್ ಕುಮಾರ್ ಅವರು ರಜೆಯ ಅರ್ಜಿಯನ್ನು ಸಲ್ಲಿಸದೇ ಮೇಲಾಧಿಕಾರಿಗಳ ಅನುಮತಿಯನ್ನು ಪಡೆಯದೇ ಕಚೇರಿಗೆ ಅನಧಿಕೃತವಾಗಿ ಗೈರು ಹಾಜರಾಗಿ ಕಚೇರಿಯ ದೈನಂದಿನ ಕೆಲಸ ಕಾರ್ಯಗಳಿಗೆ ಅಡಚಣೆಯನ್ನುಂಟು ಮಾಡಿರುತ್ತಾರೆ. ಹೀಗಾಗಿ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವರದಿ ಸಲ್ಲಿಸಿರುತ್ತಾರೆ. ಇದರನ್ವ ದ್ವಿದಸ ಟಿ.ಎನ್.ವಿನಯ್ ಕುಮಾರ್ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-2) ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಎನ್.ರಂಗಸ್ವಾಮಿ ಅವರು, ಹಲವು ಬಾರಿ ಕರ್ತವ್ಯಕ್ಕೆ ಮೇಲಾಧಿಕಾರಿಗಳ ಪೂರ್ವಾನುಮತಿ ಇಲ್ಲದೇ ಗೈರು ಹಾಜರಾಗುತ್ತಿದ್ದು, ಈ ಕುರಿತು ಹಲವಾರು ಬಾರಿ ಕಾರಣ ಕೇಳಿ ನೋಟಿಸ್‍ಗಳನ್ನು ನೀಡಲಾಗಿದ್ದರೂ ಸಹ ಸಮಂಜಸವಾದ ಉತ್ತರ ನೀಡದೆ 2025ರ ಮೇ 14 ರಿಂದ ಜೂನ್ 10 ರವರೆಗೆ ಪೂರ್ವಾನುಮತಿ ಇಲ್ಲದೆ ಕರ್ತವ್ಯಕ್ಕೆ ಗೈರು ಹಾಜರಾಗಿರುತ್ತಾರೆ. ಹೀಗಾಗಿ ಇವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ವರದಿ ಸಲ್ಲಿಸಿರುತ್ತಾರೆ. ಇದರನ್ವಯ ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-2) ಕಚೇರಿಯ ದ್ವಿದಸ ಎನ್.ರಂಗಸ್ವಾಮಿ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
 

ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಹಾಗೂ ನಿಯಮಾನುಸಾರ ಜೀವನಾಧಾರ ಭತ್ಯೆಗೆ ಅರ್ಹರಿರುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026